Wednesday, June 24, 2026
Homeಕರಾವಳಿಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನ ಭರ್ಜರಿ ಮಳೆ; ಮೀನುಗಾರರಿಗೆ ಹೈ ಅಲರ್ಟ್!

ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನ ಭರ್ಜರಿ ಮಳೆ; ಮೀನುಗಾರರಿಗೆ ಹೈ ಅಲರ್ಟ್!

- Advertisement -
- Advertisement -

ಮಂಗಳೂರು: ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಉಡುಪಿ ಮತ್ತು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಮುಂದಿನ ಕೆಲವು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.

ಮೇ 27ರಂದು ಕರಾವಳಿಯ ಹಲವು ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದ್ದು, ಮೇ 28ರಂದು ಕೆಲವೆಡೆ ಮಾತ್ರ ಮಳೆ ನಿರೀಕ್ಷಿಸಲಾಗಿದೆ. ಹಾಗೆಯೇ ಮೇ 29ರಂದು ಉಭಯ ಜಿಲ್ಲೆಗಳಲ್ಲಿ ಮತ್ತೆ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆಯಿದೆ.

ಇನ್ನು ಮಳೆ ಮತ್ತು ಗುಡುಗು-ಸಿಡಿಲಿನ ಜೊತೆಗೆ ಗಾಳಿಯ ವೇಗವೂ ತೀವ್ರವಾಗಿರುವುದರಿಂದ, ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಹೆಚ್ಚಿನ ಜಾಗರೂಕತೆ ವಹಿಸಬೇಕು ಮತ್ತು ಹವಾಮಾನ ಇಲಾಖೆ ನೀಡುವ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.

- Advertisement -

Latest News

error: Content is protected !!