Friday, October 4, 2024
Homeತಾಜಾ ಸುದ್ದಿಮುಂಬೈನಲ್ಲಿ ಭಾರೀ ಮಳೆ; ನಾಲ್ವರು ಮೃತ್ಯು; ಶಾಲಾ-ಕಾಲೇಜುಗಳಿಗೆ ರಜೆ

ಮುಂಬೈನಲ್ಲಿ ಭಾರೀ ಮಳೆ; ನಾಲ್ವರು ಮೃತ್ಯು; ಶಾಲಾ-ಕಾಲೇಜುಗಳಿಗೆ ರಜೆ

spot_img
- Advertisement -
- Advertisement -

ಮಹಾನಗರ ಮುಂಬೈನಲ್ಲಿ ಭಾರೀ ಮಳೆಯಿಂದಾಗಿ ನಾಲ್ಕು ಜನ ಸಾವನ್ನಪ್ಪಿದ್ದಾರೆ. ಮಳೆಯು ಬುಧವಾರ ಸಂಜೆ ಹೊತ್ತಿನಲ್ಲೇ ಶುರುವಾಗಿದ್ದು, 5 ಗಂಟೆಗಳ ಅವಧಿಯಲ್ಲಿ ಮುಂಬೈ ಮಹಾನಗರ ಪ್ರದೇಶದ ಕೆಲವು ಭಾಗಗಳಲ್ಲಿ 200 ಮಿ.ಮೀ ಗಿಂತ ಹೆಚ್ಚು ಮಳೆ ಸುರಿದಿದೆ ಎನ್ನಲಾಗಿದೆ.

ಇನ್ನು ಮುಂಬೈಯಲ್ಲಿ ಗುರುವಾರ ಬೆಳಗ್ಗೆ 8:30 ರವರೆಗೆ ರೆಡ್ ಅಲರ್ಟ್ ಇರುವ ಹಿನ್ನೆಲೆಯಲ್ಲಿ ಮುಂಬೈ ಮತ್ತು ಥಾಣೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿದು ಬಂದಿದೆ. 

ಮಳೆಯಿಂದಾಗ ಬಹಳಷ್ಟು ಸಮಸ್ಯೆ ಉಂಟಾಗಿದ್ದು, ಪ್ರಯಾಣಿಕರು ರಸ್ತೆಗಳಲ್ಲಿ, ನಿಲ್ದಾಣಗಳಲ್ಲಿ ಮತ್ತು ರೈಲುಗಳಲ್ಲಿ ಗಂಟೆಗಟ್ಟಲೆ ಸಿಕ್ಕಿಹಾಕಿಕೊಂಡರು. ಇನ್ನು  ಅಂಧೇರಿ ಪೂರ್ವದ ನುಲ್ಲಾದಲ್ಲಿ ಭಾರೀ ಮಳೆಗೆ ಬಲಿಯಾದವರಲ್ಲಿ 45 ವರ್ಷದ ಮಹಿಳೆಯು ಕೂಡ ಒಬ್ಬರು. ಕಲ್ಯಾಣ್ನ ವರಪ್ ಗ್ರಾಮದಲ್ಲಿ ಕಲ್ಲು ಕೋರೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಖೋಪೋಲಿಯ ಜೆನಿತ್ ಜಲಪಾತದ ಬಳಿ ಮತ್ತೋರ್ವ ಮಹಿಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. 

ಮುಂಬೈಯಲ್ಲಿ ಇಂದು ಕೂಡ ಮೋಡ ಕವಿದ ವಾತಾವರಣವಿದ್ದು, ಹವಾಮಾನ ಇಲಾಖೆ ನೀಡಿದ ಮಾಹಿತಿಯಂತೆ ಇಂದು ಕೂಡ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ.

- Advertisement -
spot_img

Latest News

error: Content is protected !!