Wednesday, June 24, 2026
HomeWorldಮುಂಬೈನಲ್ಲಿ ಧಾರಾಕಾರ ಮಳೆ: ರೆಡ್‌ ಅಲರ್ಟ್‌ ಘೋಷಿಸಿದ ಭಾರತೀಯ ಹವಾಮಾನ ಇಲಾಖೆ

ಮುಂಬೈನಲ್ಲಿ ಧಾರಾಕಾರ ಮಳೆ: ರೆಡ್‌ ಅಲರ್ಟ್‌ ಘೋಷಿಸಿದ ಭಾರತೀಯ ಹವಾಮಾನ ಇಲಾಖೆ

- Advertisement -
- Advertisement -

ಮುಂಬೈ: ಭಾರತೀಯ ಹವಾಮಾನ ಇಲಾಖೆಯು ಮುಂಬೈನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ.

ಶನಿವಾರದಿಂದಲೂ ಮುಂಬೈ ನಗರದಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಜನತೆ ಎಚ್ಚರಿಕೆಯಿಂದ ಇರುವಂತೆ ಭಾರತೀಯ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದ್ದು , ನಾಳೆಯೂ ಶಾಲೆಗಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆಯಿದೆ.

ತುರ್ತು ಸಂದರ್ಭಗಳಲ್ಲಿ ನಿವಾಸಿಗಳು ತಮ್ಮ ವಿಪತ್ತು ನಿಯಂತ್ರಣ ಸಹಾಯವಾಣಿ 1916ನ್ನು ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.

- Advertisement -

Latest News

error: Content is protected !!