Sunday, October 18, 2026
Homeಕರಾವಳಿಕರಾವಳಿಯಾದ್ಯಂತ ಗುಡುಗು ಸಹಿತ ಭಾರಿ ಮಳೆ; ಎರಡು ಮನೆಗಳಿಗೆ ಹಾನಿ

ಕರಾವಳಿಯಾದ್ಯಂತ ಗುಡುಗು ಸಹಿತ ಭಾರಿ ಮಳೆ; ಎರಡು ಮನೆಗಳಿಗೆ ಹಾನಿ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಾದ್ಯಂತ ಶುಕ್ರವಾರ ರಾತ್ರಿ ಹಾಗೂ ಶನಿವಾರ ಮುಂಜಾನೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಜನರು ತೊಂದರೆ ಅನುಭವಿಸಿದ್ದಾರೆ.

ಶುಕ್ರವಾರ ರಾತ್ರಿ ಹಾಗೂ ಶನಿವಾರ ಮುಂಜಾನೆ ಮತ್ತೆ ಭಾರಿ ಮಳೆಯಾಗಿದ್ದು, ಕಾರ್ಕಳ, ಉಡುಪಿ, ಬ್ರಹ್ಮಾವರ ಮತ್ತು ಕಾಪು ತಾಲೂಕುಗಳಲ್ಲಿ ಉತ್ತಮ ಮಳೆ ದಾಖಲಾಗಿದೆ.

ಇನ್ನು ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದ ಜಯಪಾಲ್ ಎಂಬುವರ ಮನೆ ಮತ್ತು ತೋಟಕ್ಕೆ ಮಧ್ಯರಾತ್ರಿ ಸಿಡಿಲು ಬಡಿದ ಪರಿಣಾಮ ತೋಟಗಾರಿಕಾ ಬೆಳೆಗಳಿಗೆ ಅಪಾರ ಹಾನಿಯಾಗಿದೆ. ಘಟನೆಯಿಂದ ಸುಮಾರು ₹1 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.

ನಿರಂತರ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿತ್ತು. ಮಳೆಯ ನಡುವೆಯೂ ವಿದ್ಯುತ್ ವ್ಯತ್ಯಯದಿಂದ ಜನರು ತೊಂದರೆ ಅನುಭವಿಸುವಂತಾಯಿತು. ಕೆಲವು ಪ್ರದೇಶಗಳಲ್ಲಿ ಶನಿವಾರ ಬೆಳಗ್ಗೆಯಷ್ಟೇ ವಿದ್ಯುತ್ ಸಂಪರ್ಕವನ್ನು ಮರುಸ್ಥಾಪಿಸಲಾಗಿದೆ.

- Advertisement -

Latest News

error: Content is protected !!