Wednesday, June 3, 2026
Homeಶಿವಮೊಗ್ಗಆಗುಂಬೆ ಘಾಟ್ ನಲ್ಲಿ ಸೆ. 15 ರವರೆಗೆ ಭಾರೀ ವಾಹನ ಸಂಚಾರ ನಿಷೇಧ

ಆಗುಂಬೆ ಘಾಟ್ ನಲ್ಲಿ ಸೆ. 15 ರವರೆಗೆ ಭಾರೀ ವಾಹನ ಸಂಚಾರ ನಿಷೇಧ

- Advertisement -
- Advertisement -

ಶಿವಮೊಗ್ಗ: ತೀರ್ಥಹಳ್ಳಿ ಭಾಗದಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಆಗುಂಬೆ ಘಾಟ್ ನಲ್ಲಿ ಭಾರಿ ವಾಹನ ಸಂಚಾರ ನಿಷೇಧ ಮಾಡಲಾಗಿದೆ.

ಭೂ ಕುಸಿತ ಉಂಟಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗ ಸೂಚಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಜೂನ್‌ 27 ರಿಂದ ಸೆಪ್ಟೆಂಬರ್‌ 15ರವರೆಗೆ ಭಾರೀ ವಾಹನ ಸಂಚಾರ ನಿಷೇಧ ಮಾಡಲಾಗಿದ್ದು, ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

ತೀರ್ಥಹಳ್ಳಿ–ಉಡುಪಿ ಮಾರ್ಗದಲ್ಲಿ ಸಂಚರಿಸುವ ಭಾರೀ ವಾಹನಗಳಿಗೆ ತೀರ್ಥಹಳ್ಳಿ–ಮಾಸ್ತಿಕಟ್ಟೆ ಮತ್ತು ಸಿದ್ದಾಪುರ–ಕುಂದಾಪುರ- ಉಡುಪಿ ಮಾರ್ಗದಲ್ಲಿ ಸಂಚರಿಸುವಂತೆ ಸೂಚನೆ ನೀಡಲಾಗಿದೆ.

ಇದೇ ವೇಳೆ ಹಾಸನ‌ ಜಿಲ್ಲೆಯ ಸಕಲೇಶಪುರ ತಾಲೂಕಿನ ಆನೆಮಹಲ್ ಬಳಿ ಇತ್ತೀಚೆಗಷ್ಟೇ ನಿರ್ಮಾಣವಾಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿರುಕು ಉಂಟಾಗಿದೆ.

ಮಂಗಳೂರು-ಬೆಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬಿರುಕು ಕಾಣಿಸಿದೆ.ಮಳೆಗೆ ಹೊಸದಾಗಿ ನಿರ್ಮಾಣವಾಗಿರುವ ಕಾಂಕ್ರೀಟ್ ರಸ್ತೆಯ ತಳಪದರದ ಮಣ್ಣು ಕುಸಿತಗೊಂಡಿದೆ.

- Advertisement -

Latest News

error: Content is protected !!