- Advertisement -
- Advertisement -
ಪುತ್ತೂರು : ಪುತ್ತೂರು ತಾಲೂಕಿನಾದ್ಯಂತ ಮಂಗಳವಾರ ಸುರಿದ ಧಾರಾಕಾರ ಮಳೆಗೆ ನಗರದ ನೂತನ ನ್ಯಾಯಾಲಯ ಸಂಕೀರ್ಣದ ಆವರಣದ ತಡೆಗೋಡೆ ಕುಸಿದು ಬಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.
ಇತ್ತೀಚೆಗಷ್ಟೇ ಈ ನೂತನ ನ್ಯಾಯಾಲಯದ ಕಟ್ಟಡವು ಉದ್ಘಾಟನೆಗೊಂಡು ಕಾರ್ಯಾಚರಣೆಯನ್ನು ಆರಂಭಿಸಿತ್ತು. ಆದರೆ ನಿರಂತರವಾಗಿ ಸುರಿದ ಮಳೆಯಿಂದಾಗಿ ಮಣ್ಣು ಸಡಿಲಗೊಂಡು, ನ್ಯಾಯಾಲಯದ ಸಂಪರ್ಕ ರಸ್ತೆಯ ಪಕ್ಕದಲ್ಲಿದ್ದ ಬೃಹತ್ ತಡೆಗೋಡೆ ಒಮ್ಮೆಲೆ ನೆಲಸಮಗೊಂಡಿದೆ.
ತಡೆಗೋಡೆ ಕುಸಿದ ಪರಿಣಾಮ ನ್ಯಾಯಾಲಯ ಸಂಕೀರ್ಣದ ಆವರಣಕ್ಕೆ ಭಾರಿ ನಷ್ಟ ಉಂಟಾಗಿದ್ದು, ಸಂಪರ್ಕ ರಸ್ತೆಯ ಭಾಗವೂ ಕುಸಿಯುವ ಭೀತಿ ಎದುರಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಕ್ಷಣವೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಅವಘಡಗಳು ಸಂಭವಿಸದಂತೆ ತಡೆಯಲು ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.
- Advertisement -


