Thursday, June 4, 2026
Homeಕರಾವಳಿಕೇರಳದಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆ: ಜಾಲ್ಸೂರು ಮತ್ತು ಸಾರಡ್ಕ ಗಡಿಯಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆ: ಜಾಲ್ಸೂರು ಮತ್ತು ಸಾರಡ್ಕ ಗಡಿಯಲ್ಲಿ ಕಟ್ಟೆಚ್ಚರ

- Advertisement -
- Advertisement -

ಸುಳ್ಯ: ಕೇರಳದಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಸುಳ್ಯ ತಾಲೂಕಿನ ಜಾಲ್ಸೂರು ಮತ್ತು ಪುತ್ತೂರು ತಾಲೂಕಿನ ಸಾರಡ್ಕ ಗಡಿಯಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ.

ಗಡಿ ಚೆಕ್ ಪೋಸ್ಟ್ ನಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಆರ್ ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಇಲ್ಲದವರಿಗೆ ಜಿಲ್ಲೆಯೊಳಗೆ ಪ್ರವೇಶ ನಿರಾಕರಿಸಲಾಗುತ್ತಿದ್ದು, ಚೆಕ್ ಪೋಸ್ಟ್ ನಲ್ಲಿ ಪ್ರತಿ ವಾಹನದ ಪ್ರಯಾಣಿಕರ ಬಳಿ ರಿಪೋರ್ಟ್ ಪರಿಶೀಲನೆ ಮಾಡಲಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲಾಡಳಿತದ ಆದೇಶದ ವಿರುದ್ಧ ಪ್ರತಿಭಟಿಸಿ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ ಕೇರಳದ ವ್ಯಕ್ತಿಯೊಬ್ಬನನ್ನು ಗಡಿ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನೆಗೆಟಿವ್ ರಿಪೋರ್ಟ್ ಇಲ್ಲದವರನ್ನು ವಾಪಸ್ ಕಳುಹಿಸಲಾಗುತ್ತಿದೆ.

- Advertisement -

Latest News

error: Content is protected !!