- Advertisement -
![]()
- Advertisement -
ಮಂಗಳೂರು: ಮಂಗಳೂರು ಏರ್ ಪೋರ್ಟ್ ಸುತ್ತಮುತ್ತ ಅಲರ್ಟ್ ಘೋಷಿಸಲಾಗಿದೆ ಎಂದು ಮಾಹಿತಿಯೊಂದು ಲಭಿಸಿದೆ.
ಅನುಮಾನಾಸ್ಪದ ವ್ಯಕ್ತಿಗಳು, ವಸ್ತುಗಳು, ಅಥವಾ ಡ್ರೋನ್ ಬಳಕೆ ಕಂಡು ಬಂದಲ್ಲಿ ತಕ್ಷಣ ಪೊಲೀಸರಿಗೆ ತಿಳಿಸುವಂತೆ ಹೇಳಲಾಗಿದೆ. ವಿಮಾನ ನಿಲ್ದಾಣ ವ್ಯಾಪ್ತಿಯ ಅದ್ಯಪಾಡಿ ಸುತ್ತಮುತ್ತಲಿನ ಪರಿಸರದಲ್ಲಿ ಅಲರ್ಟ್ ಘೋಷಿಸಲಾಗಿದ್ದು, ಏರ್ ಪೋರ್ಟ್ ಭದ್ರತೆಯ ಸಿಐಎಸ್‌ಎಫ್ ಹಾಗೂ ಬಜ್ಪೆ ಪೊಲೀಸರು ಸ್ಥಳೀಯರಿಗೆ ಜಾಗೃತಿ ಮೂಡಿಸುತ್ತಿದ್ದಾರೆ.
ನವರಾತ್ರಿ ಹಬ್ಬದ ಸಂದರ್ಭದಲ್ಲಿ ಬಾಂಬ್ ದಾಳಿ ನಡೆಸುವ ಸಾಧ್ಯತೆಗಳಿದ್ದು ಹಾಗೂ ಇದಕ್ಕೆ ಪುಷ್ಟಿ ನೀಡುವಂತೆ ರಾಜ್ಯದಲ್ಲಿ ಸ್ಯಾಟಲೈಟ್ ಫೋನ್ ಕರೆಗಳ ವಿಚಾರವು ಜನರಲ್ಲಿ ಇನ್ನಷ್ಟು ಆತಂಕ ಮೂಡಿಸಿದೆ. ಇನ್ನು ಕರಾವಳಿ ಭಾಗವು ಉಗ್ರರ ಟಾರ್ಗೆಟ್ ಆಗಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಹೈ ಅಲರ್ಟ್ ಘೋಷಿಸಲಾಗಿದೆ.
- Advertisement -


