Tuesday, July 14, 2026
Homeತಾಜಾ ಸುದ್ದಿಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ; ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿಕೆ.

ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ; ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿಕೆ.

- Advertisement -
- Advertisement -

ಮೈಸೂರು: ಹೈಕಮಾಂಡ್ ಮುಖ್ಯಮಂತ್ರಿಯಾಗಿ ಇರು ಎಂದರೆ ಇರುತ್ತೇನೆ, ಮುಂದುವರೆಯಿರಿ ಎಂದರೆ ಮುಂದುವರೆಯುತ್ತೇನೆ ಎಂದು ಅಧಿಕಾರ ಹಸ್ತಾಂತರ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಮೈಸೂರಿನಲ್ಲಿ ಇಂದು ಮಾತನಾಡಿದ ಸಿದ್ಧರಾಮಯ್ಯ, ಎಲ್ಲವೂ ಹೈಕಮಾಂಡ್ ಗೆ ಬಿಟ್ಟಿರುವ ವಿಚಾರವಾಗಿದ್ದು ಯಾರೋ ಏನೋ ಹೇಳುತ್ತಾರೆ ಎಂಬುದು ಮುಖ್ಯ ಅಲ್ಲ, ಹೈಕಮಾಂಡ್ ತೀರ್ಮಾನ ಮಾತ್ರವಷ್ಟೇ ನನಗೆ ಮುಖ್ಯ ಎಂದು ಹೇಳಿದ್ದಾರೆ.

ಕೇವಲ ಮೈಸೂರಿನ ಜನ ಮಾತ್ರವಲ್ಲ ಇಡೀ ರಾಜ್ಯದ ಜನ ನಾನು ಮುಖ್ಯಮಂತ್ರಿಯಾಗಿ ಇರಬೇಕೆಂದು ಬಯಸಿದ್ದಾರೆ. ಹೈಕಮಾಂಡ್ ಮೇಲೆ ನನಗೆ ಸಂಪೂರ್ಣ ವಿಶ್ವಾಸ ಇದ್ದು, ಹಾಗಾಗಿ
ಅಂತಿಮ ತೀರ್ಮಾನವನ್ನು ಹೈಕಮಾಂಡ್ ಮಾಡುತ್ತದೆ ಎಂದೂ ಸಿದ್ಧರಾಮಯ್ಯ ಹೇಳಿದ್ದಾರೆ.

ಅಲ್ಲದೇ, ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತರೆಡು ಬಜೆಟ್ ಮಂಡಿಸುತ್ತೇನೆ ಎಂದಿರುವ ಸಿಎಂ, ನನಗೆ ಬಜೆಟ್ ನ ದಾಖಲೆಗಳ ಮೇಲೆ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!