ಬೆಂಗಳೂರು: ರಾಜ್ಯ ಸರಕಾರವು ಕರ್ನಾಟಕ ಪೊಲೀಸ್ ಕಾಯ್ದೆಗೆ ತಂದಿದ್ದ ತಿದ್ದುಪಡಿ ಆನ್ಲೈನ್ ಗೇಮ್ ಸೇರಿದಂತೆ ಬೆಟ್ಟಿಂಗ್ ಹಾಗೂ ಆನ್ಲೈನ್ ಜೂಜು ನಿಷೇಧ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ಆನ್ಲೈನ್ ಗೇಮಿಂಗ್ ಕಂಪನಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು ಅವುಗಳ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಅಲ್ಲದೆ ಇದರಿಂದಾಗಿ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ.
ರಾಜ್ಯ ಸರ್ಕಾರದ ತಿದ್ದುಪಡಿಯನ್ನು ಪ್ರಶ್ನಿಸಿ ಆಲ್ ಇಂಡಿಯಾ ಗೇಮಿಂಗ್ ಫೆಡರೇಶನ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ವಿಭಾಗೀಯ ಪೀಠ ಈ ತೀರ್ಪು ನೀಡಿದ್ದು, ಈ ತಿದ್ದುಪಡಿ ಸಂವಿಧಾನ ಬಾಹಿರವೆಂದು ಹೇಳಿರುವ ಹೈಕೋರ್ಟ್ ಸರಕಾರ ನಿಯಮಾನುಸಾರ ಹೊಸ ಕಾಯ್ದೆ ಮಾಡಬಹುದು ಎಂದು ಹೇಳಿದೆ.
ಕುದುರೆ ಓಟ ಮತ್ತು ಲಾಟರಿ ಹೊರತುಪಡಿಸಿ ಇತರ ಯಾವುದೇ ಆಟಕ್ಕೆ ಹಣವನ್ನು ಪಣವಾಗಿ ಕಟ್ಟುವ ಆನ್ಲೈನ್ ಗೇಮ್ ಸೇರಿದಂತೆ ಎಲ್ಲಾ ಜೂಜಾಟವನ್ನು ನಿಷೇಧಿಸಲಾಗಿದ್ದು ಜಾಮೀನುರಹಿತ ಅಪರಾಧ ಎಂದು ರಾಜ್ಯ ಸರ್ಕಾರ ಘೋಷಿಸಿತ್ತು.


