Friday, June 5, 2026
Homeತಾಜಾ ಸುದ್ದಿಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್ : ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಎತ್ತಿಹಿಡಿದ ಹೈಕೋರ್ಟ್

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್ : ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಎತ್ತಿಹಿಡಿದ ಹೈಕೋರ್ಟ್

- Advertisement -
- Advertisement -

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್ ಎದುರಾಗಿದೆ. ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಎತ್ತಿಹಿಡಿದು ಹೈಕೋರ್ಟ್ ಆದೇಶ ನೀಡಿದೆ.

ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದ್ದಾರೆ.ಈ ಮೂಲಕ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ನೀಡಿದೆ.

ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದರು. ರಾಜ್ಯಪಾಲರು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದವನ್ನು ಆಲಿಸಿದ್ದಂತ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.

- Advertisement -

Latest News

error: Content is protected !!