Wednesday, June 3, 2026
Homeಕರಾವಳಿಮಂಗಳೂರುಬೆಳ್ತಂಗಡಿ : ತಮ್ಮ ವಿರುದ್ಧದ ಎರಡು ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಪೂಂಜ ಅರ್ಜಿ...

ಬೆಳ್ತಂಗಡಿ : ತಮ್ಮ ವಿರುದ್ಧದ ಎರಡು ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಪೂಂಜ ಅರ್ಜಿ ಪ್ರಕರಣ; ಶಾಸಕರು ಎರಡು ಪ್ರಕರಣ ರದ್ದು ಕೋರಿದ ಸಲ್ಲಿಸಿದ್ದ ಅರ್ಜಿ ವಜಾ

- Advertisement -
- Advertisement -

ಬೆಳ್ತಂಗಡಿ : ಅಕ್ರಮ‌ ಕಲ್ಲು ಕೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಹೋಗಿ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಹಾಗೂ ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಹಾಕಿದ್ದ ಅರ್ಜಿಯನ್ನು ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ಇಂದು ವಜಾಗೊಳಿಸಿದೆ.

ಎರಡು ಪ್ರಕರಣವನ್ನು ರದ್ದು ಕೋರಿ ಹಾಕಿದ ಅರ್ಜಿಯ ಬಗ್ಗೆ ಜೂ.5 ರಂದು(ಇಂದು)  ಬೆಂಗಳೂರಿನ ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ  ವಿಚಾರಣೆ ನಡೆಯಿತು. ಈ ವೇಳೆ ಕೋರ್ಟ್ ಎರಡು ಪ್ರಕರಣವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿದೆ ಹಾಗೂ ಈ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯಪ್ರದೇಶಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

- Advertisement -

Latest News

error: Content is protected !!