Wednesday, May 15, 2024
Homeತಾಜಾ ಸುದ್ದಿ5 ಮತ್ತು 8 ನೇ ತರಗತಿಯ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಆದೇಶ

5 ಮತ್ತು 8 ನೇ ತರಗತಿಯ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಆದೇಶ

spot_img
- Advertisement -
- Advertisement -

ಬೆಂಗಳೂರು :  ಪಬ್ಲಿಕ್ ಪರೀಕ್ಷೆಯ ಟೆನ್ಶನ್ ನಲ್ಲಿದ್ದ 5 ಹಾಗೂ 8ನೇ ತರಗತಿ ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್ ಕೊಟ್ಟಿದೆ ಹೈಕೋರ್ಟ್.5 ಮತ್ತು 8 ನೇ ತರಗತಿಯ ಪಬ್ಲಿಕ್ ಪರೀಕ್ಷೆ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಈ ಬಾರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಜ್ಯದ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿತ್ತು, ಆದರೆ ಇದೀಗ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಆದೇಶ ಹೊರಡಿಸಿದೆ.ಮುಂದಿನ ವರ್ಷದಿಂದ ಪರೀಕ್ಷೆ ನಡೆಸಬಹುದು, ಮುಂದಿನ ವರ್ಷದಿಂದ ಆಯಾ ನಿಯಮಗಳಿಗನುಸಾರವಾಗಿ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್ ಹೇಳಿದೆ.

2022-23ನೇ ಸಾಲಿನಿಂದ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿತ್ತು, ರಾಜ್ಯ ಪಠ್ಯಕ್ರಮವನ್ನು ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿತ್ತು, ಶಿಕ್ಷಣ ಇಲಾಖೆಗೆ ನಿರ್ಧಾರಕ್ಕೆ ಪೋಷಕರು ಹಾಗೂ ವಿದ್ಯಾರ್ಥಿಗಳು ಅಸಮಾಧಾನ ಹೊರಹಾಕಿದ್ದರು. ಈ ಬೆನ್ನಲ್ಲೇ 5 ಮತ್ತು 8 ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

- Advertisement -
spot_img

Latest News

error: Content is protected !!