Sunday, June 7, 2026
Homeತಾಜಾ ಸುದ್ದಿರಾಮಮಂದಿರಕ್ಕೆ ಶುಭ ಕೋರಿದ್ದಕ್ಕೆ ಕೊಲೆ, ಅತ್ಯಾಚಾರದ ಬೆದರಿಕೆ!.. ಕ್ರಿಕೇಟಿಗ ಶಮಿ ಪತ್ನಿಗೆ ಸೂಕ್ತ ಭದ್ರತೆ ಕಲ್ಪಿಸಿ...

ರಾಮಮಂದಿರಕ್ಕೆ ಶುಭ ಕೋರಿದ್ದಕ್ಕೆ ಕೊಲೆ, ಅತ್ಯಾಚಾರದ ಬೆದರಿಕೆ!.. ಕ್ರಿಕೇಟಿಗ ಶಮಿ ಪತ್ನಿಗೆ ಸೂಕ್ತ ಭದ್ರತೆ ಕಲ್ಪಿಸಿ ಹೈಕೋರ್ಟ್​ ಆದೇಶ

- Advertisement -
- Advertisement -

ಕೋಲ್ಕತಾ: ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮದ ವೇಳೆ ಶುಭ ಕೋರಿರುವ ಕಾರಣಕ್ಕೆ ಟೀಮ್ ಇಂಡಿಯಾ ವೇಗಿ ಮೊಹಮದ್ ಶಮಿ ಪತ್ನಿಗೆ ಅತ್ಯಾಚಾರ ಬೆದರಿಕೆ ಬರುತ್ತಿವೆಯೆಂದು ಆಕೆ ಕೋರ್ಟ್ ಮೆಟ್ಟಿಲೇರಿದ್ದಾರೆ. ಇತ್ತೀಚೆಗೆ ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸವನ್ನು ಸ್ವಾಗತಿಸಿ ಮೊಹಮದ್ ಶಮಿ ಅವರ ಪತ್ನಿ ಹಸೀನ್ ಜಹಾನ್ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಪ್ರಕಟಿಸಿದ್ದರು. ಇದರ ಬೆನ್ನಲ್ಲೇ ಅವರಿಗೆ ಕೊಲೆ, ಅತ್ಯಾಚಾರದ ಬೆದರಿಕೆಗಳು ಬಂದಿದ್ದವು. ಇದರಿಂದಾಗಿ ತನಗೆ ಮತ್ತು ಮಗಳಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಅವರು ಪೊಲೀಸರ ಮೊರೆ ಹೋಗಿದ್ದರು.ಈ ಹಿನ್ನೆಲೆಯಲ್ಲಿ ಹಸೀನ್​​​ ಜಹಾನ್ ಅವರಿಗೆ ಸೂಕ್ತ ಭದ್ರತೆ ಕಲ್ಪಿಸುವಂತೆ ಪೊಲೀಸ್​ ಇಲಾಖೆಗೆ ಹೈಕೋರ್ಟ್​ ಆದೇಶಿಸಿದೆ.

ಸಾಮಾಜಿಕ ಜಾಲತಾಣದ ಮೂಲಕ ನನ್ನನ್ನು ನಿರಂತರವಾಗಿ ದಾಳಿ ಮಾಡಲಾಗುತ್ತಿದೆ. ನನಗೆ ಅಸುರಕ್ಷಿತ ಭಾವನೆ ಮೂಡುತ್ತಿದ್ದು, ದಯವಿಟ್ಟು ಸಹಾಯ ಮಾಡಿ. ಇದೇ ರೀತಿ ಮುಂದುವರೆದರೆ ನಾನು ಮಾನಸಿಕ ಖಿನ್ನತೆಗೊಳಗಾಗುವ ಸಾಧ್ಯತೆಯಿದೆ. ಆದರೆ ಪೊಲೀಸರು ತಮ್ಮ ಮನವಿಯನ್ನು ಪುರಸ್ಕರಿಸಲಿಲ್ಲ ಎಂದು ಹಸೀನ್​ ಅರ್ಜಿಯಲ್ಲಿ ಹೇಳಿದ್ದರು. ಅರ್ಜಿದಾರರಿಗೆ ಯಾವುದೇ ರೀತಿಯ ಪ್ರಾಣ ಹಾನಿಯಾಗದಂತೆ ಕ್ರಮ ಕೈಗೊಳ್ಳಬೇಕು. ಅವರ ದೂರಿನ ಪ್ರಕಾರ ಕ್ರಮ ಕೈಗೊಳ್ಳಬೇಕು ಮತ್ತು ಸೂಕ್ತ ಭದ್ರತೆ ಒದಗಿಸುವಂತೆ ಪೊಲೀಸರಿಗೆ ನ್ಯಾಯಾಲಯ ಆದೇಶಿಸಿದೆ.

- Advertisement -

Latest News

error: Content is protected !!