- Advertisement -
- Advertisement -
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಲು ಆದೇಶ ಹೊರಡಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಿಎಂ ಸಿದ್ದರಾಮಯ್ಯ ಪತ್ನಿಗೆ 14 ಸೈಟ್ ಹಂಚಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿ ಅರ್ಜಿ ಸಲ್ಲಿಸಿದ್ದು, ಇಂದು ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಪ್ರಕರಣದ ಬಗ್ಗೆ ವಿಚಾರಣೆ ನಡೆಸಲಾಯಿತು.
ಇದುವರೆಗೂ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ನೋಟಿಸ್ ಜಾರಿಯಾಗದ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಿ ಎಂದು ಕೋರ್ಟ್ ಆದೇಶ ಹೊರಡಿಸಿದೆ. ನೋಟಿಸ್ ಜಾರಿಯಾದ ಪ್ರತಿವಾದಿಗಳಿಗೆ ನೋಟಿಸ್ ನೀಡಲು ಸೂಚನೆ ನೀಡಿದ ಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್.4ಕ್ಕೆ ಮುಂದೂಡಿಕೆ ಮಾಡಿದೆ.
- Advertisement -