Wednesday, May 8, 2024
Homeಕರಾವಳಿವಿನಾಯಕ ಬಾಳಿಗಾ ಕೊಲೆ ಪ್ರಕರಣ: ಸರ್ಕಾರ ನೇಮಿಸಿದ್ದ ವಿಶೇಷ ಅಭಿಯೋಜಕರನ್ನು ರದ್ದುಗೊಳಿಸಿದ ಹೈಕೋರ್ಟ್​!

ವಿನಾಯಕ ಬಾಳಿಗಾ ಕೊಲೆ ಪ್ರಕರಣ: ಸರ್ಕಾರ ನೇಮಿಸಿದ್ದ ವಿಶೇಷ ಅಭಿಯೋಜಕರನ್ನು ರದ್ದುಗೊಳಿಸಿದ ಹೈಕೋರ್ಟ್​!

spot_img
- Advertisement -
- Advertisement -

ಮಂಗಳೂರು: ವಿನಾಯಕ ಬಾಳಿಗಾ ಕೊಲೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಲು ವಿಶೇಷ ಸರಕಾರಿ ಅಭಿಯೋಜಕರನ್ನಾಗಿ (ಎಸ್‌ಪಿಪಿ) ಹಿರಿಯ ವಕೀಲ ರವೀಂದ್ರನಾಥ ಕಾಮತ್ ಅವರನ್ನು ನೇಮಿಸಿದ್ದ ರಾಜ್ಯ ಸರಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ಎಸ್‌ಪಿಪಿ ನೇಮಕ ಸಂಬಂಧ ಸರಕಾರವು 2016ರಲ್ಲಿ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸುವಂತೆ ವಿನಾಯಕ ಪಾಂಡುರಂಗ ಬಾಳಿಗಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ನರೇಶ್‌ ಶೆಣೈ ಎಂಬಾತ ಅರ್ಜಿ ಸಲ್ಲಿಸಿದ್ದ. ಅರ್ಜಿ ಸಂಬಂಧ ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈಗ ತೀರ್ಪು ಪ್ರಕಟಿಸಿದೆ. ‘ಪ್ರಕರಣದಲ್ಲಿ ಹೊಸ ಎಸ್‌ಪಿಪಿ ನೇಮಕ ಮಾಡುವಂತೆ ಸರಕಾರಕ್ಕೆ ಮನವಿ ಸಲ್ಲಿಸಲು 6ನೇ ಪ್ರತಿವಾದಿಯಾಗಿರುವ ಮೃತನ ಸಹೋದರಿ ಮುಕ್ತ ಅವಕಾಶ ಹೊಂದಿದ್ದಾರೆ. ಒಂದು ವೇಳೆ, ಅವರು ಮನವಿ ಸಲ್ಲಿಸಿದರೆ, ಸರಕಾರ ಅದನ್ನು ಕಾನೂನು ರೀತಿಯಲ್ಲಿ ಪರಿಗಣಿಸಬೇಕು’ ಎಂದು ನ್ಯಾಯಪೀಠ ನಿರ್ದೇಶಿಸಿದೆ.

2016ರ ಮಾ. 21ರಂದು ಮಂಗಳೂರಿನ ಕೊಡಿಯಾಲ್‌ಬೈಲ್‌ನಲ್ಲಿ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಆ ದಿನ ಬೆಳಗಿನ ಜಾವ ನಗರದ ಬೆಸೆಂಟ್ ಕಾಲೇಜಿನ ಸಮೀಪದ ಪಿವಿಎಸ್ ಕಲಾಕುಂಜದ ಪಕ್ಕದ ಓಣಿಯಲ್ಲಿ ವಿನಾಯಕ ಪಾಂಡುರಂಗ ಬಾಳಿಗ ಅವರ ಹತ್ಯೆ ನಡೆದಿತ್ತು. ವಿನಾಯಕ ಪಾಂಡುರಂಗ ಬಾಳಿಗರವರು ಎಂದಿನಂತೆ ಮುಂಜಾನೆ ವೆಂಕಟರಮಣ ದೇವಸ್ಥಾನಕ್ಕೆ ಹೋಗಲು ತನ್ನ ಸ್ಕೂಟರ್ನಲ್ಲಿ ಮನೆಯಿಂದ ಹೊರಟು ಸುಮಾರು 75 ಮೀಟರ್ ದೂರ ಹೋಗುವಷ್ಟರಲ್ಲಿ ಬಾಳಿಗರನ್ನು ತಡೆದು ನಿಲ್ಲಿಸಿದ ಅಪರಿಚಿತ ವ್ಯಕ್ತಿಗಳು ಅವರನ್ನು ತಲವಾರಿನಿಂದ ಕಡಿದು, ಬಂದ ಬೈಕ್ನಲ್ಲಿ ಪರಾರಿಯಾಗಿದ್ದರು.

ಈ ಕೊಲೆ ಕೃತ್ಯದ ಬಗ್ಗೆ ವಿನಾಯಕ ಪಾಂಡುರಂಗ ಬಾಳಿಗರವರ ತಂಗಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಕೊಲೆ ಪ್ರಕರಣವನ್ನು ಭೇದಿಸಲು ಮಂಗಳೂರು ನಗರ ಕೇಂದ್ರ ಉಪ-ವಿಭಾಗದ ಎ.ಸಿ.ಪಿ ತಿಲಕ್ ಚಂದ್ರ ಮತ್ತು ಸಿಸಿಬಿ ಇನ್ಸ್ ಪೆಕ್ಟರ್ ವೆಲೆಂಟೈನ್ ಡಿ’ಸೋಜ, ಶಾಂತರಾಮ, ರಾಜೇಶ್, ರವೀಶ್ ನಾಯಕ್, ಮಾರುತಿ ನಾಯಕ್ ಮತ್ತು ಪಿಎಸ್ಐ ಶ್ಯಾಮಸುಂದರ್ ರವರುಗಳನ್ನೊಳಗೊಂಡ ತಂಡಗಳನ್ನು ರಚಿಸಲಾಗಿತ್ತು.ಕೊಲೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾದ ವಿನಿತ್ ಪೂಜಾರಿ ಮತ್ತು ನಿಶಿತ್ ದೇವಾಡಿಗ ಎಂಬ ಇಬ್ಬರು ಆರೋಪಿಗಳನ್ನು 27-03-2016 ರಂದು ಬೆಳಿಗ್ಗೆ ಬಿ.ಸಿ.ರೋಡ್ ರೈಲ್ವೆ ನಿಲ್ದಾಣದ ಬಳಿಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದರು.

- Advertisement -
spot_img

Latest News

error: Content is protected !!