Monday, April 29, 2024
Homeತಾಜಾ ಸುದ್ದಿಎಸಿಬಿ ರಚನೆ ಆದೇಶ ರದ್ದುಪಡಿಸಿದ ಹೈಕೋರ್ಟ್: ಲೋಕಾಯುಕ್ತಕ್ಕೆ ಮತ್ತೆ ಅಧಿಕಾರ

ಎಸಿಬಿ ರಚನೆ ಆದೇಶ ರದ್ದುಪಡಿಸಿದ ಹೈಕೋರ್ಟ್: ಲೋಕಾಯುಕ್ತಕ್ಕೆ ಮತ್ತೆ ಅಧಿಕಾರ

spot_img
- Advertisement -
- Advertisement -

ಬೆಂಗಳೂರು: ಲೋಕಾಯುಕ್ತ ಪೊಲೀಸ್ ಠಾಣೆ ಸ್ಥಾನಮಾನ ರದ್ದು ವಿಚಾರಕ್ಕೆ ಸಂಬಂಧಿಸಿ ಹೈಕೋರ್ಟ್ ಎಸಿಬಿ ರಚನೆ ಆದೇಶ ರದ್ದುಪಡಿಸಿದೆ. ಲೋಕಾಯುಕ್ತ ವ್ಯಾಪ್ತಿಗೆ ನೀಡಿ ಆದೇಶ ಹೊರಡಿಸಿದೆ.

ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ಅಗತ್ಯವಿದೆ. ಮೂರು ವರ್ಷದ ಅವಧಿಗೆ ಅಧಿಕಾರಿಗಳ ನೇಮಕವಾಗಬೇಕು. ಲೋಕಾಯುಕ್ತರ ನೇಮಕ ವೇಳೆ ಅರ್ಹತೆ ಪರಿಗಣಿಸಬೇಕು. ಜಾತಿ ಆಧರಿಸಿ ಲೋಕಾಯುಕ್ತ, ಉಪಲೋಕಾಯುಕ್ತ ನೇಮಕವಾಗಬಾರದು. ಭ್ರಷ್ಟಾಚಾರ ಆರೋಪ ಹೊತ್ತವರು ಪಾರಾಗಬಾರದು. ಹೀಗಾಗಿ ಲೋಕಾಯುಕ್ತ ಪೊಲೀಸರೇ ತನಿಖೆ ಮುಂದುವರಿಸಬೇಕು ಎಂದು ಸರ್ಕಾರದ ಆದೇಶ ರದ್ದುಪಡಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಈ ಮೂಲಕ ಹೈಕೋರ್ಟ್ ಲೋಕಾಯುಕ್ತ ಪೊಲೀಸ್ ಠಾಣೆ ಸ್ಥಾನಮಾನ ಮರುಸ್ಥಾಪಿಸಿದೆ. ಎಲ್ಲಾ ಪ್ರಕರಣಗಳೂ ಲೋಕಾಯುಕ್ತ ಪೊಲೀಸರಿಗೆ ವರ್ಗಾವಣೆ ಮಾಡಿ ಆದೇಶಿಸಿದೆ. ಎಸಿಬಿ ರಚನೆ ಪ್ರಶ್ನಿಸಿ ಬೆಂಗಳೂರು ವಕೀಲರ ಸಂಘ, ಚಿದಾನಂದ ಅರಸ್, ಸಮಾಜ ಪರಿವರ್ತನಾ ಸಮುದಾಯ, ಮತ್ತಿತರರು PIL ಸಲ್ಲಿಸಿದ್ದರು. ಈ ಸಂಬಂಧ ಇಂದು ತೀರ್ಪು ಪ್ರಕಟಗೊಂಡಿದ್ದು ಎಸಿಬಿ ರಚನೆ ಆದೇಶ ರದ್ದುಪಡಿಸಲಾಗಿದೆ.

- Advertisement -
spot_img

Latest News

error: Content is protected !!