Thursday, May 2, 2024
Homeತಾಜಾ ಸುದ್ದಿಅಕ್ರಮ ಗಣಿಗಾರಿಕೆ ಪ್ರಕರಣ: ಗಾಲಿ ಜನಾರ್ಧನ ರೆಡ್ಡಿ ಪತ್ನಿಗೆ ಹೈಕೋರ್ಟ್​ನಿಂದ ಬಿಗ್​ ರಿಲೀಫ್..!

ಅಕ್ರಮ ಗಣಿಗಾರಿಕೆ ಪ್ರಕರಣ: ಗಾಲಿ ಜನಾರ್ಧನ ರೆಡ್ಡಿ ಪತ್ನಿಗೆ ಹೈಕೋರ್ಟ್​ನಿಂದ ಬಿಗ್​ ರಿಲೀಫ್..!

spot_img
- Advertisement -
- Advertisement -

ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಪತ್ನಿ ಲಕ್ಷ್ಮೀ ಅರುಣಾಗೆ AMC (ಅಸೋಸಿಯೇಟೆಡ್ ಮೈನಿಂಗ್ ಕಂಪನಿ) ಅಕ್ರಮ ಗಣಿಗಾರಿಕೆ ಕೇಸ್​ನಲ್ಲಿ ರಿಲೀಫ್ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ CBI ವಿಶೇಷ ಕೋರ್ಟ್ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಜನಾರ್ದನರೆಡ್ಡಿ ವಿರುದ್ಧದ AMC ಅಕ್ರಮ ಗಣಿಗಾರಿಕೆ ಕೇಸ್ ಪ್ರಕರಣದಿಂದ ಜಿ.ಲಕ್ಷ್ಮೀ ಅರುಣಾ ಹೆಸರನ್ನು ವಿಶೇಷ ಕೋರ್ಟ್ ಕೈಬಿಟ್ಟಿತ್ತು. ಇದನ್ನು ಪ್ರಶ್ನಿಸಿ ಸಮಾಜ ಪರಿವರ್ತನಾ ಸಮುದಾಯ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿತ್ತು. ಇದೀಗ, ಅರ್ಜಿಯನ್ನು ವಜಾಗೊಳಿಸಲಾಗಿದೆ.

ಅಸೋಸಿಯೇಟೆಡ್ ಮೈನಿಂಗ್ ಕಂಪನಿ ಅಕ್ರಮ ಗಣಗಾರಿಕೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ದೋಷಾರೋಪಪಟ್ಟಿ ಸಲ್ಲಿಸಿತ್ತು. ಇದರಲ್ಲಿ ಗಾಲಿ ಜನಾರ್ಧನ ರೆಡ್ಡಿ ಮೊದಲನೆ ಆರೋಪಿ, ಅವರ ಪತ್ನಿ ಅರುಣಾ ಎರಡನೇ ಆರೋಪಿಯಾಗಿದ್ದರು. ಇದನ್ನು ಪ್ರಶ್ನಿಸಿ ಅರುಣಾ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯ ರೆಡ್ಡಿ ಪತ್ನಿಯನ್ನ ಪ್ರಕರಣದಿಂದ‌ ಕೈಬಿಟ್ಟಿತ್ತು.

ಇದನ್ನು ಪ್ರಶ್ನಿಸಿ ಸಾಮಾಜಿಕ ಹೋರಾಟಗಾರ ಎಸ್.ಆರ್. ಹಿರೇಮಠ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಂತಿಮ ಆದೇಶ ಹೊರಡಿಸಿದ ಹೈಕೋರ್ಟ್, ಸಿಬಿಐ ವಿಶೇಷ ನ್ಯಾಯಾಲಯದ ಆದೇಶವನ್ನು ಪುರಸ್ಕರಿಸಿದ್ದು, ಪ್ರಕರಣದಿಂದ ಲಕ್ಷ್ಮೀ ಅರುಣಾ ಹೆಸರು ಕೈಬಿಟ್ಟಿದ್ದು ಸರಿಯಿದೆ ಎಂದು ನ್ಯಾ.ಕೆ.ಸೋಮಶೇಖರ್‌ರವರಿದ್ದ ಏಕಸದಸ್ಯ ಪೀಠ ಆದೇಶ ನೀಡಿದೆ.

- Advertisement -
spot_img

Latest News

error: Content is protected !!