- Advertisement -
- Advertisement -
ಬೆಂಗಳೂರು; ಸೌಜನ್ಯ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಧರ್ಮಸ್ಥಳದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಹೆಗ್ಗಡೆ ಕುಟುಂಬಸ್ಥರು ಹೈಕೋರ್ಟ್ ಮೊರೆ ಹೋದ ಬೆನ್ನಲ್ಲೇ ಇದೀಗ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಖಡಕ್ ಎಚ್ಚರಿಕೆ ನೀಡಿದೆ.
ಧರ್ಮಸ್ಥಳದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಹೇಳಿದೆ. ಅಲ್ಲದೇ ಇದಕ್ಕೆ ತಪ್ಪಿದಲ್ಲಿ ಡಿ.ಜಿ. ಮತ್ತು ಐ.ಜಿ., ಸರಕಾರದ ಮುಖ್ಯ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸೇರಿದಂತೆ ಪೋಲಿಸ್ ಉನ್ನತ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ಹೈಕೋರ್ಟ್ ಆದೇಶ ಹೊರಡಿಸಿದೆ.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಹೆಗ್ಗಡೆ ಕುಟುಂಬಸ್ಥರ ಪರವಾಗಿ ಖ್ಯಾತ ಹಿರಿಯ ನ್ಯಾಯವಾದಿಗಳಾದ ಉದಯ ಹೊಳ್ಳ ಹಾಗೂ ರಾಜಶೇಖರ್ ಹಿಲ್ಯಾರು ವಾದ ಮಂಡಿಸಿದರು.
- Advertisement -