Thursday, June 25, 2026
Homeಕರಾವಳಿಮಂಗಳೂರು: ಕಾಂಗ್ರೆಸ್ ಕಚೇರಿಯಲ್ಲಿ ಹೈ ಡ್ರಾಮಾ - ಹಿರಿಯರು, ಯುವ ಮುಖಂಡರ ನಡುವೆ ವಾಗ್ವಾದ !

ಮಂಗಳೂರು: ಕಾಂಗ್ರೆಸ್ ಕಚೇರಿಯಲ್ಲಿ ಹೈ ಡ್ರಾಮಾ – ಹಿರಿಯರು, ಯುವ ಮುಖಂಡರ ನಡುವೆ ವಾಗ್ವಾದ !

- Advertisement -
- Advertisement -

ಮಂಗಳೂರು: ಜ.18ರ ಮಂಗಳವಾರ ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿ ಎದುರು ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡರು ಹಾಗೂ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪರಸ್ಪರ ವಾಗ್ವಾದ ನಡೆಸಿದರು.

ಇದು ಕಾಂಗ್ರೆಸ್ ಕಾರ್ಯಕರ್ತರ ಸಭೆಯಾಗಿತ್ತು. ಬ್ರಹ್ಮಶ್ರೀ ನಾರಾಯಣ ಗುರುಗಳ ಕೋಷ್ಟಕ ವಿಷಯದ ಕುರಿತು ಸಭೆ ನಡೆಯಿತು.

ಮಂಗಳೂರಿನ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪಕ್ಷದ ಹಿರಿಯ ನಾಯಕರಾದ ರಮಾನಾಥ ರೈ, ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಏರಿಹೋದ ಘಟನೆ ನಡೆದಿದ್ದು ಸಭೆಯ ಮಧ್ಯೆ ಹೊಯ್ ಕೈ ನಡೆಸಿದ್ದಾರೆ. ಮಾಜಿ ಸಚಿವ ರಮಾನಾಥ ರೈ ಅವರನ್ನು ತಳ್ಳಿಕೊಂಡು ಹೋಗಿದ್ದಾರೆ.

ಮಾಜಿ ಸಚಿವ ರಮಾನಾಥ್ ರೈ ವಿರುದ್ಧ ಯುವ ಕಾಂಗ್ರೆಸ್ ಮುಖಂಡರು ಕಿಡಿಕಾರಿದರು. ಶಾಸಕ ಯು ಟಿ ಖಾದರ್, ಎಂಎಲ್ಸಿ ಮಂಜುನಾಥ ಭಂಡಾರಿ ಸೇರಿದಂತೆ ಹಿರಿಯ ಮುಖಂಡರು ಉಪಸ್ಥಿತರಿದ್ದರು.

ನಂತರ ಕಾರ್ಯಕರ್ತರು ಸಭಾಂಗಣದ ಮುಖ್ಯ ಬಾಗಿಲನ್ನು ಮುಚ್ಚಿದರು. ಸಭೆಯಿಂದ ಹೊರಬರುವಂತೆ ಹಿರಿಯ ಮುಖಂಡರು ಯುವ ಕಾಂಗ್ರೆಸ್ ಮುಖಂಡರನ್ನು ಕೇಳಿಕೊಂಡರು.

- Advertisement -

Latest News

error: Content is protected !!