Friday, June 5, 2026
Homeತಾಜಾ ಸುದ್ದಿಮಂಗಳೂರು: ಎಡಿಜಿಪಿ ಅಲೋಕ್‌ ಕುಮಾರ್‌ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಮಂಗಳೂರು: ಎಡಿಜಿಪಿ ಅಲೋಕ್‌ ಕುಮಾರ್‌ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

- Advertisement -
- Advertisement -

ಮಂಗಳೂರು: ಸರಣಿ ಹತ್ಯೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಲವರೆಗೆ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.. ಇದೀಗ ಸಹಜ ಸ್ಥಿತಿಯತ್ತ ಜಿಲ್ಲೆ ಧಾವಿಸ್ತಾ ಇದೆ. ಈ ನಡುವೆ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆ ನಡೆಯಿತು.

ಸಭೆಯಲ್ಲಿ ಮತ್ತೆ ಈ ರೀತಿ ಘಟನೆಗಳು ಮರುಕಳಿಸದಂತೆ ಯಾವ ಕ್ರಮ ಕೈಗೊಳ್ಬೇಕು ಎಂಬುದರ ಬಗ್ಗೆ ಚರ್ಚೆ ನಡೆಯಿತು. ಐಜಿ ದೇವಜ್ಯೋತಿ ರೇ, ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್., ದ.ಕ.ಜಿಲ್ಲಾ ಎಸ್ಪಿ ಋಷಿಕೇಶ್ ಸೋನಾವಾಣೆ, ಉಡುಪಿ ಜಿಲ್ಲಾ ಎಸ್ಪಿ ವಿಷ್ಣುವರ್ಧನ್, ಮಂಗಳೂರು ಉಪ ಪೊಲೀಸ್ ಆಯುಕ್ತ ಅಂಶು ಕುಮಾರ್, ದ.ಕ.ಜಿಲ್ಲಾ, ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!