Friday, June 5, 2026
Homeಕರಾವಳಿಉಡುಪಿದಕ್ಷಿಣ ಕನ್ನಡಲ್ಲಿ ಮತ್ತೆ ಅತೀ ಹೆಚ್ಚು ಕೊರೋನಾ ಪ್ರಕರಣ ದಾಖಲು!

ದಕ್ಷಿಣ ಕನ್ನಡಲ್ಲಿ ಮತ್ತೆ ಅತೀ ಹೆಚ್ಚು ಕೊರೋನಾ ಪ್ರಕರಣ ದಾಖಲು!

- Advertisement -
- Advertisement -

ಮಂಗಳೂರು: ತಿಂಗಳಲ್ಲಿ ಮೂರನೇ ಬಾರಿಗೆ ರಾಜ್ಯದಲ್ಲಿ ಅತೀ ಹೆಚ್ಚು ಪ್ರಕರಣ ದ.ಕ. ಜಿಲ್ಲೆಯಲ್ಲಿ ದಾಖಲಾಗಿದ್ದು,ಶನಿವಾರ 411 ಮಂದಿಗೆ ಕೊರೊನಾ ದೃಢಪಟ್ಟರೆ, 7 ಮಂದಿ ಸಾವನ್ನಪ್ಪಿದ್ದಾರೆ.

ಈವರೆಗೆ ಒಟ್ಟು 1,497 ಮಂದಿ ಕೊರೊನಾ ದಿಂದ ಮೃತಪಟ್ಟರೆ,ಜಿಲ್ಲೆಯಲ್ಲಿ ಶನಿವಾರ 371 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಒಟ್ಟು 1,05,533 ಮಂದಿ ಕೊರೊನಾ ಸೋಂಕಿಗೊಳಗಾಗಿದ್ದು, 1,00,354 ಮಂದಿ ಗುಣಮುಖರಾಗಿದ್ದಾರೆ. ಸದ್ಯ 3,682 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಾಸಿಟಿವಿಟಿ ದರ ಶೇ. 3.73 ಇದೆ. ಮಂಗಳೂರಿನ 4 ಮತ್ತು ಬೆಳ್ತಂಗಡಿ ತಾಲೂಕಿನ 2 ಕಂಟೈನ್‌ಮೆಂಟ್‌ ವಲಯವನ್ನಾಗಿ ಘೋಷಣೆ ಮಾಡಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಶನಿವಾರ 169 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಉಡುಪಿಯ 61 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಉಡುಪಿಯಲ್ಲಿ 98, ಕುಂದಾಪುರದಲ್ಲಿ 25, ಕಾರ್ಕಳದಲ್ಲಿ 43, ಅನ್ಯ ಜಿಲ್ಲೆಯ 3 ಮಂದಿಗೆ ಸೋಂಕು ಕಂಡುಬಂದಿದೆ. ಒಟ್ಟು 5,848 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 146 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1,296 ಪ್ರಕರಣಗಳು ಸಕ್ರಿಯವಾಗಿವೆ.

ಇನ್ನು ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 520 ಮಂದಿಗೆ ಕೊರೊನಾ ದೃಢಪಟ್ಟಿದೆ. 848 ಮಂದಿ ಗುಣಮುಖರಾಗಿದ್ದಾರೆ. 6,331 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಸಾವಿನ ಪ್ರಕರಣ ದಾಖಲಾಗಿಲ್ಲ.

- Advertisement -

Latest News

error: Content is protected !!