Wednesday, May 15, 2024
Homeತಾಜಾ ಸುದ್ದಿಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಸಂಬಂಧ- ನಳಿನ್‌ ಕುಮಾರ್‌ ವಿರುದ್ದದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಸಂಬಂಧ- ನಳಿನ್‌ ಕುಮಾರ್‌ ವಿರುದ್ದದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

spot_img
- Advertisement -
- Advertisement -

ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಸಂಬಂಧ ಮಂಗಳೂರು ಸಂಸದ ನಳಿನ್‌ ಕುಮಾರ್‌ ಕಟೀಲು ವಿರುದ್ಧ ಮಂಗಳೂರು ಪೂರ್ವ ಠಾಣೆ ಪೋಲಿಸರು ದಾಖಲಿಸಿದ್ದ ಎಫ್‌ಐಆರ್‌ ಹಾಗೂ ಮಂಗಳೂರಿನ 2ನೇ ಹೆಚ್ಚುವರಿ ಸಿವಿಲ್‌ ಹಾಗೂ ಜೆಎಂಎಫ್ಸಿ ನ್ಯಾಯಾಲಯದ ವಿಚಾರಣೆಯನ್ನು ಹೈಕೋರ್ಟ್‌ ರದ್ದುಪಡಿಸಿದೆ.

ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ 2017ರಲ್ಲಿ ನಳಿನ್‌ ಕುಮಾರ್‌ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ| ಸುನೀಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಎಫ್‌ಐಆರ್‌ ಹಾಗೂ ಜೆಎಂಎಫ್ಸಿ ನ್ಯಾಯಾಲಯದ ವಿಚಾರಣೆಯನ್ನು ರದ್ದುಪಡಿಸಿದೆ. ಇದರಿಂದ ಕ್ರಿಮಿನಲ್‌ ಪ್ರಕರಣ ಎದುರಿಸುತ್ತಿದ್ದ ಸಂಸದರು ನಿರಾಳರಾಗಿದ್ದಾರೆ. ನಳಿನ್‌ ಪರವಾಗಿ ಪವನಚಂದ್ರ ಶೆಟ್ಟಿ ವಾದಿಸಿದ್ದರು.

ಪ್ರಕರಣದಲ್ಲಿ ಆರೋಪ ರುಜುವಾತುಪಡಿಸುವಂತಹ ಅಂಶಗಳಿಲ್ಲ. ಅಲ್ಲದೆ, ಸಂವಿಧಾನದ ಪರಿಚ್ಛೇದ 105 ಪ್ರಕಾರ ಸರಕಾರದ ಆಡಳಿತ ಯಂತ್ರ ಅಥವಾ ಅಧಿಕಾರಿಗಳು ತಪ್ಪು ಮಾಡುತ್ತಿದ್ದಾರೆ ಎಂದು ಗೊತ್ತಾದರೆ ಜನಪ್ರತಿನಿಧಿಗಳು (ಸಂಸದರು) ಮಧ್ಯಪ್ರವೇಶಿಸುವ ಅಧಿಕಾರ ಹೊಂದಿದ್ದಾರೆ. ಆ ಕರ್ತವ್ಯವನ್ನು ಸಂಸದರು ನಿಭಾಯಿಸಿದ್ದಾರೆ. ಜನರನ್ನು ಪ್ರಚೋದಿಸುವ ಅಥವಾ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಉದ್ದೇಶ ಅವರದ್ದಾಗಿರಲಿಲ್ಲ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಎಫ್‌ಐಆರ್‌ ಮತ್ತು ವಿಚಾರಣೆಯನ್ನು ರದ್ದುಪಡಿಸಿದೆ. ಜತೆಗೆ ಜೆಎಂಎಫ್ಸಿ ನ್ಯಾಯಾಲಯ ತಿರಿಸ್ಕರಿಸಿದ್ದ ಬಿ ರಿಪೋರ್ಟ್‌ ಅನ್ನು ಹೈಕೋರ್ಟ್‌ ಅಂಗೀಕರಿಸಿದೆ.

- Advertisement -
spot_img

Latest News

error: Content is protected !!