Sunday, May 5, 2024
Homeತಾಜಾ ಸುದ್ದಿಕೊರೊನಾ ಇಲ್ಲದ ತಾಲೂಕುಗಳಲ್ಲಿ ಶಾಲೆಗಳನ್ನು ಪ್ರಾರಂಭಿಸಬಹುದು: ಸ್ಪಷ್ಟನೆ ಕೊಟ್ಟ ಹೈಕೋರ್ಟ್

ಕೊರೊನಾ ಇಲ್ಲದ ತಾಲೂಕುಗಳಲ್ಲಿ ಶಾಲೆಗಳನ್ನು ಪ್ರಾರಂಭಿಸಬಹುದು: ಸ್ಪಷ್ಟನೆ ಕೊಟ್ಟ ಹೈಕೋರ್ಟ್

spot_img
- Advertisement -
- Advertisement -

ಬೆಂಗಳೂರು : ಕೊರೊನಾ ಇಲ್ಲದ ತಾಲೂಕುಗಳಲ್ಲಿ ಶಾಲೆ ಆರಂಭಿಸಬಹುದು ಎಂದು ಹೈಕೋರ್ಟ್ ಸ್ಪಷ್ಟನೆ ನೀಡಿದೆ.

ಜನವರಿ 1 ರಿಂದ ರಾಜ್ಯದಲ್ಲಿ ವಿದ್ಯಾಗಮ ಆರಂಭವಾಗಲಿದೆ. ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲೂ 6 ರಿಂದ 9 ನೇ ತರಗತಿಗಳಿಗೆ ವಿದ್ಯಾಗಮ ಜಾರಿ ಮಾಡಲಾಗುತ್ತದೆ ಎಂದು ಸರ್ಕಾರದ ಪರ ವಕೀಲರು ಹೈಕೋರ್ಟ್ ಗೆ ಹೇಳಿದ್ದಾರೆ. ಸರ್ಕಾರದ ಹೇಳಿಕೆ ದಾಖಲಿಸಿಕೊಂಡ ಹೈಕೋರ್ಟ್ ಈ ನಿರ್ಧಾರಕ್ಕೆ ಬದ್ದವಾಗಿರುವಂತೆ ಸೂಚನೆ ನೀಡಿದೆ. ಶಾಲೆ ಸ್ಥಗಿತಕ್ಕಿಂತ ಪರಿಸ್ಥಿತಿ ಆಧರಿಸಿ ಕೊರೊನಾ ಇಲ್ಲದ ತಾಲೂಕುಗಳಲ್ಲಿ ಶಾಲೆ ಆರಂಭಿಸಬಹುದು ಎಂದು ಕೋರ್ಟ್ ಹೇಳಿದೆ.

ನ್ಯಾ. ಬಿ ಬಿ ನಾಗರತ್ನ ಹಾಗೂ ಆರ್ ನಟರಾಜ್ ವವರಿದ್ದ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಇನ್ನೂ. ವಿದ್ಯಾರ್ಥಿಗಳು ಬಾಲ ಕಾರ್ಮಿಕ, ಬಾಲ್ಯ ವಿವಾಹಕ್ಕೆ ಒಳಗಾಗದಂತೆ ಕ್ರಮ ವಹಿಸಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳ ಶಿಕ್ಷಣದ ಬಗ್ಗೆ ಕೂಡ ಗಮನ ವರಿಸಬೇಕು ಎಂದು ಸೂಚನೆ ನೀಡಿದೆ.

- Advertisement -
spot_img

Latest News

error: Content is protected !!