Wednesday, June 3, 2026
Homeತಾಜಾ ಸುದ್ದಿಶಾಸಕ ಹೆಚ್.ಡಿ ರೇವಣ್ಣಗೆ ಮತ್ತೆ ಸಂಕಷ್ಟ; ಮಹಿಳೆ ಅಪಹರಣ ಪ್ರಕರಣದಲ್ಲಿ ಹೈಕೋರ್ಟ್ ನೋಟಿಸ್ ಜಾರಿ

ಶಾಸಕ ಹೆಚ್.ಡಿ ರೇವಣ್ಣಗೆ ಮತ್ತೆ ಸಂಕಷ್ಟ; ಮಹಿಳೆ ಅಪಹರಣ ಪ್ರಕರಣದಲ್ಲಿ ಹೈಕೋರ್ಟ್ ನೋಟಿಸ್ ಜಾರಿ

- Advertisement -
- Advertisement -

ಬೆಂಗಳೂರು: ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಮಹಿಳೆಯ ಅಪರಹರಣ ಕೇಸ್ ನಲ್ಲಿ  ಜಾಮೀನಿನ ಮೇಲೆ  ಹೊರಗಿರುವ ಶಾಸಕ ಹೆಚ್.ಡಿ ರೇವಣ್ಣಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ.

ರೇವಣ್ಣ ಜಾಮೀನು ಪ್ರಶ್ನಿಸಿ ಎಸ್‌ ಐಟಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದು, ಕೋರ್ಟ್‌ ಗೆ ಹಾಜರಾಗುವಂತೆ ಹೆಚ್.ಡಿ. ರೇವಣ್ಣಗೆ ನೋಟಿಸ್‌ ನೀಡಲಾಗಿದೆ.

ಪ್ರಕರಣದಲ್ಲಿ ಹೆಚ್.ಡಿ. ರೇವಣ್ಣ ಅವರಿಗೆ ಜಾಮೀನು ರದ್ದು ಮಾಡುವಂತೆ ಕೋರಿ ಎಸ್ ಐಟಿ ಅರ್ಜಿ ಸಲ್ಲಿಸಿದ್ದು, ಇದಕೆ ಪ್ರತಿಕ್ರಿಯೆ ನೀಡಿರುವ ಕೋರ್ಟ್‌ ಹೆಚ್.‌ಡಿ. ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ. ನೋಟಿಸ್‌ ನೀಡಿದ ಐದು ದಿನದೊಳಗೆ ವಿಚಾರಣೆಗೆ ಹಾಜರಾಗಬೇಕೆಂದು ಕೋರ್ಟ್‌ ತಿಳಿಸಿದೆ.

- Advertisement -

Latest News

error: Content is protected !!