Thursday, April 18, 2024
Homeಕರಾವಳಿಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಗೆ ಹೈಕೋರ್ಟ್ ನಿಂದ ಸಮನ್ಸ್

ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಗೆ ಹೈಕೋರ್ಟ್ ನಿಂದ ಸಮನ್ಸ್

spot_img
- Advertisement -
- Advertisement -

ಮಂಗಳೂರು; ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಗೆ ಹೈಕೋರ್ಟ್ ಸಮನ್ಸ್ ನೀಡಿದೆ. ಸುಳ್ಯ ಮೂಲದ ಉದ್ಯಮಿ ಅಬ್ದುಲ್ಲತೀಫ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ‌ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ಸಮನ್ಸ್ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿ ವರದಿ ಸಲ್ಲಿಸುವಂತೆ ಮತ್ತು ನ.30ರಂದು ಖುದ್ದು ಹಾಜರಾಗುವಂತೆ ಸೂಚಿಸಲಾಗಿದೆ. ಲತೀಫ್ ಕೊಲೆ ಪ್ರಕರಣದಲ್ಲಿ 10 ಮಂದಿ ಆರೋಪಿಗಳಿದ್ದು, ಆ ಪೈಕಿ 7 ಮಂದಿಯ ಬಂಧನವಾಗಿದೆ.ಉಳಿದ ಮೂವರ ಬಂಧನವಾಗಿಲ್ಲ. ಈ ಬಗ್ಗೆ ರಾಜ್ಯ ಸರಕಾರ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಮಂಗಳೂರು ನಗರ ಪೊಲೀಸ್ ಆಯುಕ್ತರು, ಮುಲ್ಕಿ ಎಸ್‌ಎಚ್‌ಒ ವಿರುದ್ಧ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿತ್ತು.

2020ರಲ್ಲಿ ಸುಳ್ಯ ಮೂಲದ ಉದ್ಯಮಿ ಅಬ್ದುಲ್ಲ ತೀಫ್‌ರ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್‌ಗೆ ರಾಜ್ಯ ಹೈಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಕಾರ್ನಾಡಿನ ದಾವೂದ್ ಹಕೀಂ, ಟಿಂಬರ್ ಬಾವ, ಪಕ್ಷಿಕೆರೆಯ ಮುಸ್ತಫಾರಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಅದನ್ನು ರದ್ದುಪಡಿಸುವಂತೆ ಕೊಲೆಯಾದ ಅಬ್ದುಲ್ಲತೀಫ್‌ರ ಪತ್ನಿ, ನ್ಯಾಯವಾದಿ ಮುಬೀನಾ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮೂವರ ಜಾಮೀನನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಆದರೆ ಅವರನ್ನು ಈವರೆಗೂ ಬಂಧಿಸಿಲ್ಲ ಎಂದು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು.

- Advertisement -
spot_img

Latest News

error: Content is protected !!