Sunday, May 5, 2024
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ರಾಜ್ಯದಲ್ಲೇ ಅತೀ ಹೆಚ್ಚು ಕೊರೋನಾ ಸೋಂಕು ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ರಾಜ್ಯದಲ್ಲೇ ಅತೀ ಹೆಚ್ಚು ಕೊರೋನಾ ಸೋಂಕು ಪತ್ತೆ!

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಇಂದು 1875 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ರಾಜ್ಯದಲ್ಲೇ ಅತೀ ಹೆಚ್ಚು 410 ಪ್ರಕರಣ ಪತ್ತೆಯಾಗಿದೆ. ಇಂದು 25 ಮಂದಿ ಸೋಂಕಿತರು ಮೃತಪಟ್ಟಿದ್ದರೆ, 1502 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಇಂದಿಗೆ 24,144 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 1.20 ರಷ್ಟು ಇದೆ. ಒಟ್ಟು ಸೋಂಕಿತರ ಸಂಖ್ಯೆ 29,06,999 ಕ್ಕೆ ಏರಿಕೆಯಾಗಿದೆ. ಇದುವರೆಗೆ 28,46,244 ಜನ ಗುಣಮುಖರಾಗಿದ್ದು, 36,587 ಸೋಂಕಿತರು ಸಾವನ್ನಪ್ಪಿದ್ದಾರೆ.

ಜಿಲ್ಲಾವಾರು ಪ್ರಕರಣಗಳಲ್ಲಿ ದಕ್ಷಿಣ ಕನ್ನಡ 410, ಬೆಂಗಳೂರು ನಗರ 409, ಬಳ್ಳಾರಿ 13, ಬೆಳಗಾವಿ 39, ಬೆಂಗಳೂರು ಗ್ರಾಮಾಂತರ 37, ಬೀದರ್ 1, ಚಾಮರಾಜನಗರ 33, ಚಿಕ್ಕಬಳ್ಳಾಪುರ 23, ಚಿಕ್ಕಮಗಳೂರು 65, ಚಿತ್ರದುರ್ಗ 32, ದಾವಣಗೆರೆ 17, ಧಾರವಾಡ 23, ಗದಗ 12, ಹಾಸನ 108, ಹಾವೇರಿ 2, ಕಲಬುರ್ಗಿ 9, ಕೊಡಗು 83, ಕೋಲಾರ 35, ಕೊಪ್ಪಳ 1, ಮಂಡ್ಯ 42, ಮೈಸೂರು 146, ರಾಯಚೂರು 1, ರಾಮನಗರ 7, ಶಿವಮೊಗ್ಗ 65, ತುಮಕೂರು 52, ಉಡುಪಿ 162, ಉತ್ತರಕನ್ನಡ 46, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ತಲಾ ಒಂದು ಪ್ರಕರಣ ವರದಿಯಾಗಿದೆ.

- Advertisement -
spot_img

Latest News

error: Content is protected !!