Friday, June 5, 2026
Homeಅಪರಾಧಸುಬ್ರಹ್ಮಣ್ಯ: ವಿದ್ಯಾರ್ಥಿನಿಯಿಂದ ಅತ್ಯಾಚಾರ ಆರೋಪ, ಶಿಕ್ಷಕನ ಬಂಧನ

ಸುಬ್ರಹ್ಮಣ್ಯ: ವಿದ್ಯಾರ್ಥಿನಿಯಿಂದ ಅತ್ಯಾಚಾರ ಆರೋಪ, ಶಿಕ್ಷಕನ ಬಂಧನ

- Advertisement -
- Advertisement -

ಸುಬ್ರಹ್ಮಣ್ಯ: ವಿದ್ಯಾರ್ಥಿನಿಯೋರ್ವಳ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಸುಬ್ರಹ್ಮಣ್ಯದ ಸ್ಥಳೀಯ ಶಿಕ್ಷಣ ಸಂಸ್ಥೆಯ ಪ್ರೌಢಶಾಲಾ ಶಿಕ್ಷಕ, ರಾಯಚೂರು ಮೂಲದ ಗುರುರಾಜ್ ಎಂಬವರನ್ನು ಬಂಧಿಸಿದ್ದಾರೆ.

ಠಾಣೆಯಲ್ಲಿ ವಿದ್ಯಾರ್ಥಿನಿಯ ತಾಯಿ ನೀಡಿದ ದೂರಿನ ಮೇರೆಗೆ ಅತ್ಯಾಚಾರ ಆರೋಪದಡಿ ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದು, ಫೊಕ್ಸೋ ಪ್ರಕರಣ ದಾಖಲಾಗಿದೆ.

ಪ್ರಾಧ್ಯಾಪಕ ಗುರುರಾಜ್ ನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಸುಳ್ಯ ವೃತ್ತ ನಿರೀಕ್ಷಕರಾದ ನವೀನ್ ಚಂದ್ರ ಜೋಗಿ, ಸುಬ್ರಮಣ್ಯ ಠಾಣಾಧಿಕಾರಿ ಜಂಬು ರಾಜ ಮಹಜನ್, ಹಾಗೂ ಪೊಲೀಸ್ ಸಿಬ್ಬಂದಿಗಳು ಪ್ರಕರಣ ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!