Tuesday, May 21, 2024
Homeಕರಾವಳಿಉಡುಪಿಉಡುಪಿ: ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಜನಸಾಮಾನ್ಯರ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗಬೇಕು: ಎಂ. ಕೂರ್ಮಾರಾವ್‌

ಉಡುಪಿ: ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಜನಸಾಮಾನ್ಯರ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗಬೇಕು: ಎಂ. ಕೂರ್ಮಾರಾವ್‌

spot_img
- Advertisement -
- Advertisement -

ಉಡುಪಿ: ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಜನಸಾಮಾನ್ಯರ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವ ರೀತಿಯಲ್ಲಿ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ತಿಳಿಸಿದರು.

ಅವರು ಬುಧವಾರ ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ರಾ.ಹೆ. 66 ಮತ್ತು 169ಎ ಗೆ ಸಂಬಂಧಿಸಿದ ಕಾಮಗಾರಿಗಳ ಪ್ರಗತಿಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾ.ಹೆ. 66ರ ಕುಂದಾಪುರದ ಸಂಗಂ ಬಳಿ ಮಳೆನೀರು ನಿಂತು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ನೀರು ಸರಾಗವಾಗಿ ಹರಿಯಲು ಸ್ಥಳೀಯರ ಹಾಗೂ ರಾ.ಹೆ. ಪ್ರಾಧಿಕಾರದವರು ಸಮನ್ವಯದೊಂದಿಗೆ ವ್ಯವಸ್ಥೆ ಮಾಡುವಂತೆ ಸೂಚಿಸಿದರು.

ಕುಂದಾಪುರದ ಫ್ಲೈಓವರ್‌ ಹತ್ತಿರ ಬಾಕಿಉಳಿದಿರುವ ರಸ್ತೆಯ ಡಾಮರು, ಮಳೆ ನೀರುಸರಾಗವಾಗಿ ಹೋಗುವ ವ್ಯವಸ್ಥೆ, ಬೀದಿದೀಪ, ಸೂಚನಾ ಫ‌ಲಕ ಅಳವಡಿಕೆ, ಪಾದಚಾರಿ ದಾಟು ಇತ್ಯಾದಿ ಕಾಮಗಾರಿ ಗಳನ್ನು ಆದ್ಯತೆಯ ಮೇರೆಗೆ ಕೈಗೊಂಡು ಪೂರ್ಣಗೊಳಿಸಬೇಕು ಎಂದರು.

- Advertisement -
spot_img

Latest News

error: Content is protected !!