Saturday, October 17, 2026
Homeಕರಾವಳಿಉಡುಪಿಉಡುಪಿ: ಹಿಜಾಬ್ ಧರಿಸಿದ ಬಾಲಕಿಯರಿಗೆ ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಲು ಅವಕಾಶವಿಲ್ಲ..!

ಉಡುಪಿ: ಹಿಜಾಬ್ ಧರಿಸಿದ ಬಾಲಕಿಯರಿಗೆ ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಲು ಅವಕಾಶವಿಲ್ಲ..!

- Advertisement -
- Advertisement -

ಉಡುಪಿ: ಹಿಜಾಬ್ ಧರಿಸುವ ವಿಚಾರವಾಗಿ ಇಲ್ಲಿನ ಬಾಲಕಿಯರ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯರ ಪೈಕಿ ದ್ವಿತೀಯ ಪಿಯು (ವಿಜ್ಞಾನ) ವಿದ್ಯಾರ್ಥಿಗಳಾದ ಮೂವರಿಗೆ ಸೋಮವಾರ ನಡೆಯಲಿರುವ ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಲು ಅನುಮತಿ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ.

ಈ ವಿದ್ಯಾರ್ಥಿಗಳಲ್ಲಿ ಒಬ್ಬರಾದ ಅಲ್ಮಾಸ್ ಎ ಹೆಚ್ ಅವರು ಟ್ವೀಟ್‌ನಲ್ಲಿ ತಮ್ಮ ಮತ್ತು ಕಾಲೇಜಿನ ಇತರ ಇಬ್ಬರು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳನ್ನು ಇಂದು ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಲು ಪ್ರಾಂಶುಪಾಲರು ಅನುಮತಿಸಲಿಲ್ಲ ಎಂದು ಹೇಳಿದ್ದಾರೆ. ಪೊಲೀಸ್ ದೂರು ದಾಖಲಿಸುವುದಾಗಿ ಪ್ರಾಂಶುಪಾಲರು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಹಿಜಾಬ್ ವಿವಾದದಿಂದ ಕಾಲೇಜಿನ ಬಗ್ಗೆ ತನಗಿದ್ದ ಆಕಾಂಕ್ಷೆಗಳು ಮತ್ತು ಕನಸುಗಳು ಛಿದ್ರವಾಗುತ್ತಿವೆ ಎಂದು ಅಲ್ಮಾಸ್ ತನ್ನ ಟ್ವೀಟ್‌ನಲ್ಲಿ ಹೇಳಿದ್ದಾರೆ.

- Advertisement -

Latest News

error: Content is protected !!