Saturday, June 6, 2026
Homeಕರಾವಳಿಮಂಗಳೂರು: ಕಾಲೇಜಿನಲ್ಲಿ ಹಿಜಾಬ್ ವಿವಾದ- ವಿದ್ಯಾರ್ಥಿಗಳ ಮಧ್ಯೆ ಮಾತಿನ ಚಕಮಕಿ

ಮಂಗಳೂರು: ಕಾಲೇಜಿನಲ್ಲಿ ಹಿಜಾಬ್ ವಿವಾದ- ವಿದ್ಯಾರ್ಥಿಗಳ ಮಧ್ಯೆ ಮಾತಿನ ಚಕಮಕಿ

- Advertisement -
- Advertisement -

ಮಂಗಳೂರು: ಮಂಗಳೂರಿನ ಕಾಲೇಜಿನಲ್ಲಿ ಹಿಜಾಬ್ ವಿವಾದ ಮತ್ತೆ ಭುಗಿಲೆದಿದ್ದು, ಇಂದು ರಥಬೀದಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಘರ್ಷ ಏರ್ಪಟ್ಟಿದೆ. ಹಿಜಾಬ್ ವಿಚಾರವಾಗಿ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಹಿಜಾಬ್​ ಧರಿಸಿ ಬಂದ ವಿದ್ಯಾರ್ಥಿನಿ ನಿನ್ನ ಅಪ್ಪನ ಕಾಲೇಜಾ ಇದು. ನಾವು ಕೂಡ ಶುಲ್ಕ ಕಟ್ಟಿ ಬಂದಿದ್ದೇವೆ ಎಂದು ವಿದ್ಯಾರ್ಥಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಕೆಲ ವಿದ್ಯಾರ್ಥಿನಿಯರು ಇಂದು ಪರೀಕ್ಷೆಗೆ ಹಾಜರಾಗಲು ಹಿಜಾಬ್ ಧರಿಸಿ ಬಂದಿದ್ದು, ಈ ವೇಳೆ ಕೆಲ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಆಕ್ಷೇಪದ ಹಿನ್ನೆಲೆಯಲ್ಲಿ ಪ್ರಾಂಶುಪಾಲರು ತರಗತಿ ಹಾಜರಾಗಲು ನಿರಾಕರಿಸಿದ್ದಾರೆ. ಹೀಗಾಗಿ ಆಕ್ಷೇಪಿಸಿದ ವಿದ್ಯಾರ್ಥಿಗಳು ಮತ್ತು ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರ ನಡುವೆ ವಾಗ್ವಾದ ಆರಂಭವಾಗಿದೆ.

ಕಾಲೇಜಿನ ಗೇಟಿನ ಮುಂಭಾಗದಲ್ಲೇ ವಿದ್ಯಾರ್ಥಿಗಳು ಪರಸ್ಪರ ಜಗಳಕ್ಕಿಳಿದಿದ್ದು, ಪೊಲೀಸರು ಮಧ್ಯೆ ಪ್ರವೇಶಿಸಿದ ಬಳಿಕ ಪರಿಸ್ಥಿತಿ ಹತೋಟಿಗೆ ಬಂದಿದೆ. ಹಿಜಾಬ್​ ವಿವಾದ ಅತಿರೇಖಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಸದ್ಯ ಪ್ರಾಂಶುಪಾಲರ ನೇತೃತ್ವದಲ್ಲಿ ಕಾಲೇಜಿನಲ್ಲಿ ಸಭೆ ನಡೆಯುತ್ತಿದೆ.

- Advertisement -

Latest News

error: Content is protected !!