Wednesday, May 1, 2024
Homeತಾಜಾ ಸುದ್ದಿಶಾಲಾ ಕಾಲೇಜಿನಲ್ಲಿ ಹಿಜಾಬ್ ನಿಷೇಧ ವಾಪಾಸ್; ಮೈಸೂರಿನಲ್ಲಿ ಸಿದ್ದರಾಮಯ್ಯ ಹೇಳಿಕೆ

ಶಾಲಾ ಕಾಲೇಜಿನಲ್ಲಿ ಹಿಜಾಬ್ ನಿಷೇಧ ವಾಪಾಸ್; ಮೈಸೂರಿನಲ್ಲಿ ಸಿದ್ದರಾಮಯ್ಯ ಹೇಳಿಕೆ

spot_img
- Advertisement -
- Advertisement -

ಮೈಸೂರು: ಹಿಂದೆ ಇದ್ದ ಬಿಜೆಪಿ ಜಾರಿಗೆ ತಂದಿದ್ದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಆದೇಶವನ್ನು ಹಿಂಪಡೆಯಲು ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ. ಮೋದಿ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೇನೆ ಎಂದರು.
ಈ ಮೂಲಕ ಹಿಂದಿನ ಬಿಜೆಪಿ ಸರ್ಕಾರವು ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್‌ ನಿಷೇಧ ಮಾಡಿ ಹೊರಡಿಸಿದ್ದ ಆದೇಶವನ್ನು ಸದ್ಯ ಕಾಂಗ್ರೆಸ್‌ ಸರ್ಕಾರ ತೆರವು ಮಾಡುತ್ತಿದೆ. ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹಿಜಾಬ್‌ ಧರಿಸಿ ತೆರಳಲು ಅವಕಾಶ ನೀಡಲು ಮುಂದಾಗಿದೆ.

- Advertisement -
spot_img

Latest News

error: Content is protected !!