Thursday, July 16, 2026
Homeಕೊಡಗುಕೊಡಗಿನಲ್ಲಿ ತಾರಕ್ಕೇರಿದ ಹಿಜಾಬ್ ವಿವಾದ:  ಇಂದು ಕೂಡ ವಿದ್ಯಾರ್ಥಿನಿಯರಿಂದ ಪ್ರತಿಭಟನೆ

ಕೊಡಗಿನಲ್ಲಿ ತಾರಕ್ಕೇರಿದ ಹಿಜಾಬ್ ವಿವಾದ:  ಇಂದು ಕೂಡ ವಿದ್ಯಾರ್ಥಿನಿಯರಿಂದ ಪ್ರತಿಭಟನೆ

- Advertisement -
- Advertisement -

ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ನಗರದಲ್ಲಿ ಇಂದೂ ಕೂಡಾ ಹಿಜಾಬ್ ವಿವಾದ ಮುಂದುವರಿದಿದೆ. ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಟನೆ ನಡೆದಿದೆ.‌ ನಾಲ್ವರು ವಿದ್ಯಾರ್ಥಿನಿಯರಿಂದ ಪ್ರತಿಭಟನೆ ನಡೆದಿದ್ದು, ವಿ ವಾಂಟ್ ಜಸ್ಟೀಸ್ ಪೋಸ್ಟರ್ ಎಂಬ ಹಿಡಿದು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ.

 ತರಗತಿ ಬಹಿಷ್ಕರಿಸಿ ಕಾಲೇಜು ಗೇಟ್ ಬಳಿ ನಿಂತು ನಾಲ್ವರು ವಿದ್ಯಾರ್ಥಿನಿಯರಿಂದ ಪ್ರತಿಭಟನೆ ನಡೆದಿದೆ. ಇನ್ನೂ ಎಷ್ಟು ದಿನ ಅಂತಾ ಹೈಕೋರ್ಟ್ ಆದೇಶಕ್ಕೆ ನಾವು ಕಾಯಬೇಕು ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿನಿಯರು ಪ್ರಶ್ನಿಸಿದ್ದಾರೆ‌. ಈ ಮಧ್ಯೆ ಪ್ರತಿಭಟನೆ ಹಿನ್ನೆಲೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಬಳಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

- Advertisement -

Latest News

error: Content is protected !!