Friday, June 27, 2025
Homeಉತ್ತರ ಕನ್ನಡಶಿರೂರಿನಲ್ಲಿ ಭಾರೀ ಮಳೆಯಿಂದ ಗುಡ್ಡ ಕುಸಿತ; 2 ಕುಟುಂಬದ 9 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

ಶಿರೂರಿನಲ್ಲಿ ಭಾರೀ ಮಳೆಯಿಂದ ಗುಡ್ಡ ಕುಸಿತ; 2 ಕುಟುಂಬದ 9 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

spot_img
- Advertisement -
- Advertisement -

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗಳವಾರದಂದು ಸುರಿದ ಭೀಕರ ಮಳೆಯ ಪರಿಣಾಮವಾಗಿ ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿಯಲ್ಲಿ ಗುಡ್ಡ ಕುಸಿತವಾಗಿದ್ದು, ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು 9 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಹೆದ್ದಾರಿ ಪಕ್ಕದಲ್ಲಿದ್ದ ಮನೆಯಲ್ಲಿನ ಕುಟುಂಬದ ಸದಸ್ಯರು ಮಣ್ಣಿನಡಿ ಸಿಲುಕಿಕೊಂಡಿದ್ದು, ಒಂದೇ ಕುಟುಂಬದ ಐವರು ಸಿಲುಕಿದ್ದಾರೆ ಎನ್ನಲಾಗಿದೆ. ಒಟ್ಟಾಗಿ ಎರಡು ಕುಟುಂಬಗಳ ಒಟ್ಟು ಒಂಬತ್ತು ಮಂದಿ ಮಣ್ಣಿನಡಿ ಸಿಲುಕೊಂಡಿದ್ದು, ಮಣ್ಣಿನಲ್ಲಿ ಸಿಲುಕಿರುವವರನ್ನು ಲಕ್ಷ್ಮಣ ನಾಯ್ಕ (47), ಶಾಂತಿ ನಾಯ್ಕ (36), ರೋಶನ್ (11), ಅವಾಂತಿಕಾ (6), ಜಗನ್ನಾಥ(55 ) ಎಂದು ಗುರುತಿಸಲಾಗಿದೆ.

ಇನ್ನು ಗುಡ್ಡ ಕುಸಿತದ ಪರಿಣಾಮವಾಗಿ ಕಾರವಾರ, ಗೋವಾ, ಅಂಕೋಲಾದಿಂದ ಕೇರಳ, ಮಂಗಳೂರು, ಕುಮಟಾ ಮತ್ತಿತರ ಭಾಗಗಳಿಗೆ ತೆರಳುವವರು ಹೆದ್ದಾರಿಯಲ್ಲಿ ಕಾಲ ಕಳೆಯುವಂತಾಗಿದೆ. ಹೆದ್ದಾರಿಯಲ್ಲಿ ನಿಂತಿರುವ ಅನೇಕ ವಾಹನಗಳಿಗೂ ಹಾನಿ ಉಂಟಾಗಿದೆ.  ರಸ್ತೆಯಲಿದ್ದ ಒಂದು ಗ್ಯಾಸ್ ಟ್ಯಾಂಕರ್ ಹತ್ತಿರದ ಗಂಗಾವಳಿ ನದಿಗೆ ಉರುಳಿ ಬಿದ್ದಿದ್ದು, ಅದರಲ್ಲಿದ್ದ ಚಾಲಕ ಕ್ಲೀನರ್ ಕೂಡ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವುದಾಗಿ ತಿಳಿದು ಬಂದಿದೆ.

ಗುಡ್ಡವನ್ನ ಚತುಷ್ಪಥ ಹೆದ್ದಾರಿಗಾಗಿ ಕೊರೆಯಲಾಗಿದ್ದು, ಬಿಡದೇ ತಾಲೂಕಿನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಗುಡ್ಡ ಕುಸಿತವಾಗಿರುವುದರಿಂದ, ಹೆದ್ದಾರಿಯಲ್ಲಿ ಮಣ್ಣು ಕಲ್ಲುಗಳು ಬಿದ್ದು ಸಂಚರಿಸಲು ಆಗದಂತಹ ಸ್ಥಿತಿ ಏರ್ಪಟ್ಟಿದೆ. ರಾಷ್ಟ್ರೀಯ ಹೆದ್ದಾರಿ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.

ಘಟನಾ ಸ್ಥಳದಲ್ಲಿ ಅಂಕೋಲಾ ತಾಲೂಕು ಆಡಳಿತ ಅಗ್ನಿಶಾಮಕದಳ ಪೊಲೀಸ್ ಇಲಾಖೆ ಸಿಬ್ಬಂದಿಗಳು ಬೀಡುಬಿಟ್ಟಿದ್ದು, ಮಣ್ಣಿನ ಅಡಿಯಲ್ಲಿ ಸಿಲುಕಿರುವವರ ಸಂಖ್ಯೆ ಎಷ್ಟು ಎಂದು ಇನ್ನಷ್ಟೇ ತಿಳಿಯಬೇಕಿದೆ. ಆದರೆ ರಸ್ತೆಯ ಮೇಲೆ ಬಿದ್ದಿರುವ ಮಣ್ಣನ್ನು ತೆರವು ಮಾಡಲು 24 ಗಂಟೆಗೂ ಅಧಿಕ ಕಾಲ ಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -
spot_img

Latest News

error: Content is protected !!