Monday, June 8, 2026
Homeಕರಾವಳಿಬಂಟ್ವಾಳ ತಾಲೂಕಿನಲ್ಲಿ ಗುಡ್ಡ ಕುಸಿತ, ಮನೆ ಹಾನಿ ಭೀತಿ: ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ ಮಾಜಿ...

ಬಂಟ್ವಾಳ ತಾಲೂಕಿನಲ್ಲಿ ಗುಡ್ಡ ಕುಸಿತ, ಮನೆ ಹಾನಿ ಭೀತಿ: ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ ಮಾಜಿ ಸಚಿವ ರಮಾನಾಥ ರೈ

- Advertisement -
- Advertisement -
ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬಂಟ್ವಾಳ ತಾಲೂಕಿನ ಪ್ರಾಕೃತಿಕ ವಿಕೋಪದಿಂದ ತೊಂದರೆಗಳು ಉದ್ಭವಿಸುತ್ತಿದೆ.

ಇದರಿಂದಾಗಿ ತಾಲೂಕಿನ ಹಲವೆಡೆಗಳಲ್ಲಿ ಗುಡ್ಡ ಕುಸಿತ, ಮನೆ ಹಾನಿಗಳು ಸಂಭವಿಸುತ್ತಲೇ ಇವೆ. ಅರಳ, ಕಾವಳಪಡೂರು, ಕಾಡಬೆಟ್ಟು, ಮೂಡನಡುಗೋಡು, ಪಂಜಿಕಲ್ಲು ಗ್ರಾಮಗಳಲ್ಲಿ ಮನೆ ಹಾನಿಯಾಗಿರು ಘಟನೆ ನಡೆದಿರುತ್ತದೆ. ಬಂಟ್ವಾಳ ಪುರಸಭಾ ವ್ಯಾಪ್ತಿಯ ಗೂಡಿನಬಳಿಗೆ ಮಾಜಿ ಸಚಿವ ಬಿ. ರಮಾನಾಥ ರೈ ಭೇಟಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರಿಗೆ ಕರೆ ಮಾಡಿ ಸೂಕ್ತ ಪರಿಹಾರ ಹಾಗೂ ಗರಿಷ್ಟ ಒತ್ತು ನೀಡಲು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಪದ್ಮಶೇಖರ ಜೈನ್, ಬೇಬಿ ಕುಂದರ್, ಚಚಂದ್ರಶೇಖರ ಕರ್ಣ, ಮಾಣಿಕ್ಯ ರಾಜ್ ಜೈನ್, ಜನಾರ್ದನ ಸಾಪಲ್ಯ ಮತ್ತಿತರು ಉಪಸ್ಥಿತರಿದ್ದರು.

- Advertisement -

Latest News

error: Content is protected !!