- Advertisement -


- Advertisement -
ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ರವಿವಾರ ನಸುಕಿನ ಜಾವ ಸುಮಾರು 2:30ರ ವೇಳೆಗೆ ಭಾರಿ ಮಳೆಯಿಂದಾಗಿ ಭೀಕರ ಗುಡ್ಡ ಕುಸಿತ ಸಂಭವಿಸಿದ್ದು, ಕೆಳಭಾಗದಲ್ಲಿ ಶೆಡ್ ನಿರ್ಮಿಸಿಕೊಂಡು ವಾಸಿಸುತ್ತಿದ್ದ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮೃತರನ್ನು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೊಕ್ಕರೆಗಾರು ಗ್ರಾಮ ಮೂಲದ ಮಲ್ಲಿಕಾರ್ಜುನ (35), ನಾಗವೇಣಿ (28) ಮತ್ತು ಅವರ ಮೂರು ವರ್ಷದ ಮಗು ಸಂತೋಷ ಎಂದು ಗುರುತಿಸಲಾಗಿದೆ. ಮಣ್ಣಿನ ಅಡಿಯಲ್ಲಿ ಸಿಲುಕಿರುವ ಶವಗಳನ್ನು ಹೊರತೆಗೆಯಲು ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಶ್ರಮಿಸುತ್ತಿದ್ದಾರೆ.
ಇದೇ ವೇಳೆ, ಪಕ್ಕದ ಶೆಡ್‌ನಲ್ಲಿದ್ದು ತೀವ್ರವಾಗಿ ಗಾಯಗೊಂಡವರನ್ನು ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


