Wednesday, June 24, 2026
Homeಅಪರಾಧಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ : ಕಟ್ಟುನಿಟ್ಟಿನ ಕ್ರಮಕ್ಕೆ ಸ್ಪೀಕರ್‌ ಖಾದರ್‌ ಸೂಚನೆ

ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ : ಕಟ್ಟುನಿಟ್ಟಿನ ಕ್ರಮಕ್ಕೆ ಸ್ಪೀಕರ್‌ ಖಾದರ್‌ ಸೂಚನೆ

- Advertisement -
- Advertisement -

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಅವರನ್ನು ಮೇ 01 ಗುರುವಾರದಂದು ಬಜ್ಪೆಯಲ್ಲಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದ್ದು, ಕೊಲೆ ಮಾಡಿದ ದುಷ್ಕರ್ಮಿಗಳನ್ನು ಶೀಘ್ರವೇ ಪತ್ತೆ ಹಚ್ಚಿ, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸ್ಪೀಕರ್‌ ಯು.ಟಿ ಖಾದರ್‌ ಸೂಚನೆ ನೀಡಿದ್ದಾರೆ.

ಘಟನೆಯ ಬಗ್ಗೆ ಸಿಎಂ ಹಾಗೂ ಗೃಹ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗಿದ್ದು, ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಲು ಬೇಕಾದ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

- Advertisement -

Latest News

error: Content is protected !!