Wednesday, June 3, 2026
Homeಕರಾವಳಿಮಂಗಳೂರು; ಬೋಳಿಯಾರು ಚೂರಿ ಇರಿತ ಪ್ರಕರಣದ ಹಿನ್ನೆಲೆಯಲ್ಲಿ ಹಿಂದೂ ಜನಜಾಗೃತಿ ಸಭೆ

ಮಂಗಳೂರು; ಬೋಳಿಯಾರು ಚೂರಿ ಇರಿತ ಪ್ರಕರಣದ ಹಿನ್ನೆಲೆಯಲ್ಲಿ ಹಿಂದೂ ಜನಜಾಗೃತಿ ಸಭೆ

- Advertisement -
- Advertisement -

ಮಂಗಳೂರು; ವಿಜಯೋತ್ಸವ ಮೆರವಣಿಗೆ ಬಳಿಕ ಬೋಳಿಯಾರಿನಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ ಪ್ರಕರಣ‌ದ ಹಿನ್ನೆಲೆಯಲ್ಲಿ ಘಟನೆಯನ್ನು ಖಂಡಿಸಿ ಜನಾಂದೋಲನ ಜನಜಾಗೃತಿ ಸಭೆ ನಡೆಯಿತು.

ಉಳ್ಳಾಲ ತಾಲೂಕಿನ ಅಸೈಗೋಳಿಯ ಮೈದಾನದಲ್ಲಿ ಹಿಂದೂ ಜನಜಾಗೃತಿ ಸಮಿತಿಯಿಂದ ಸಭೆ ಆಯೋಜಿಸಲಾಗಿತ್ತು.

ಸಭೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ್ ಕಾಮತ್, ಡಾ.ವೈ. ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಹರೀಶ್ ಪೂಂಜ ಸೇರಿದಂತೆ ಹಲವರು ಭಾಗಿಯಾಗಿದ್ದರು.ಹಿಂದೂ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ ಜನಜಾಗೃತಿ ಸಭೆಯಲ್ಲಿ ಭಾಷಣ ಮಾಡಿದರು.

ಜನಜಾಗೃತಿ ಸಭೆಯ ಹಿನ್ನೆಲೆಯಲ್ಲಿ ಅಸೈಗೋಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲಿ ಜೂನ್ 9ರಂದು ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ ಘಟನೆ ಸಂಭವಿಸಿತ್ತು.

- Advertisement -

Latest News

error: Content is protected !!