ಮಂಗಳೂರಿನಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ನಾಪತ್ತೆಯಾಗಿ ಬಳಿಕ ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಯುವತಿಯ ತಂದೆ ಕಣ್ಣೀರು ಹಾಕುತ್ತಿದ್ದಾರೆ.
ಯುವತಿಯ ತಂದೆ ವಿನೋದ್ ಕುಮಾರ್ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ್ದಾರೆ, ನಗರದ ಖಾಸಗಿ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದ ಅವಳಿಗೆ ಅಶ್ಪಾಕ್ ಜೊತೆ ಲವ್ ಇರುವುದು ನನಗೆ ಗೊತ್ತಾಗಿತ್ತು. ಬಳಿಕ ಆಕೆಗೆ ಬುದ್ದಿ ಹೇಳಿ ಉಳ್ಳಾಲದ ಸಂಬಂಧಿಕರ ಮನೆಗೆ ಕಳುಹಿಸಿದ್ದೆವು. ಅದರೆ ಅತ ಅಲ್ಲಿಗೂ ಬಂದು ಜೂನ್ 30 ರಂದು ಆಕೆಯನ್ನು ಅಪಹರಣ ಮಾಡಿದ್ದಾನೆ. ಮಗಳನ್ನು ಕರೆತರಲು ಸಾಕಷ್ಟು ಪ್ರಯತ್ನ ಮಾಡಿದರೂ ಸಾಧ್ಯವಾಗಿಲ್ಲ ಎಂದಿದ್ದಾರೆ. ಅಲ್ಲದೇ ನಾನು ಅಲ್ಲಿನ ಜಮಾತ್ ಹೋಗಿ, ನನ್ನ ಮಗಳನ್ನು ಆತನಿಂದ ರಕ್ಷಿಸಿ ಕೊಡುವಂತೆ ಮನವಿ ಮಾಡುತ್ತೇನೆ ಎಂದು ಕಣ್ಣೀರು ಹಾಕಿದ್ದಾರೆ.
ಆಶ್ಪಾಕ್ ನನ್ನ ಮಗನಿಗೆ ಕರೆ ಮಾಡಿ ಮಗಳನ್ನು ಕರೆದು ಕೊಂಡು ಓಡಿ ಹೋಗಿರುವುದಾಗಿ ಹೇಳಿದ್ದಾನೆ. ಊರವರು ಹೇಳುವ ಪ್ರಕಾರ ಆತನಿಗೆ ಈಗಾಗಲೇ ಎರಡು ಮದುವೆಯಾಗಿದೆ. ಆತನ ಮೇಲೆ ಹದಿನಾರಕ್ಕೂ ಹೆಚ್ಚು ಕೇಸ್ ಗಳಿವೆ. ಪೊಲೀಸರು ಆತನನ್ನು ಬಂಧಿಸಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.ಈ ಪ್ರಕರಣದಲ್ಲಿ ಪಾಂಡೇಶ್ವರ ಪೊಲೀಸರು ಆರೋಪಿ ಮಹಮ್ಮದ್ ಅಶ್ಫಾಕ್ ಮತ್ತು ಯುವತಿಯನ್ನು ಕಾಸರಗೋಡಿನಲ್ಲಿ ಪತ್ತೆ ಹಚ್ಚಿದ್ದಾರೆ. ಅದೇ ಯುವಕನನ್ನು ಮದುವೆಯಾಗುತ್ತೇನೆಂದು ಹೇಳುತ್ತಿದ್ದ ಯುವತಿಯನ್ನು ಪೊಲೀಸರು ಮಂಗಳೂರಿಗೆ ಕರೆತಂದು ಇಟ್ಟಿದ್ದಾರೆ. ತನ್ನ ಸ್ವಇಚ್ಛೆಯಿಂದ ಹೋಗಿದ್ದಾಗಿ ಯುವತಿ ಹೇಳಿದ್ದರಿಂದ ಪೊಲೀಸರು ಆರೋಪಿ ಅಶ್ಫಾಕ್‌ನನ್ನು ಬಂಧಿಸದೆ ಬಿಟ್ಟಿದ್ದಾರೆ. ಆರೋಪಿ ಮಹಮ್ಮದ್ ಅಶ್ಫಾಕ್ ಕ್ರಿಮಿನಲ್ ಹಿನ್ನೆಲೆಯವನಾಗಿದ್ದು, ಆತನ ಮೇಲೆ ಕಾಸರಗೋಡು ನಗರದ ವಿವಿಧ ಠಾಣೆಗಳಲ್ಲಿ 15 ಪ್ರಕರಣಗಳು ದಾಖಲಾಗಿದೆ.
ಈ ಪ್ರಕರಣ ಕುರಿತಂತೆ ಈಗಾಗಲೇ ಹಿಂದೂ ಪರ ಸಂಘಟನೆಗಳು ಇದೊಂದು ಲವ್ ಜಿಹಾದ್ ಪ್ರಕರಣವಾಗಿದ್ದು, ಈ ಕುರಿತಂತೆ ಕಠಿಣ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿವೆ.


