Friday, May 3, 2024
Homeಕರಾವಳಿರೈಲಿನಲ್ಲಿ ಜೊತೆಯಾಗಿ ಪ್ರಯಾಣಿಸುತ್ತಿದ್ದ ಹಿಂದೂ ಯುವತಿಯರು ಹಾಗೂ ಮುಸ್ಲಿಂ ಯುವಕರು; ಪುತ್ತೂರು ರೈಲು ನಿಲ್ದಾಣದಲ್ಲಿ ಜಮಾಯಿಸಿದ...

ರೈಲಿನಲ್ಲಿ ಜೊತೆಯಾಗಿ ಪ್ರಯಾಣಿಸುತ್ತಿದ್ದ ಹಿಂದೂ ಯುವತಿಯರು ಹಾಗೂ ಮುಸ್ಲಿಂ ಯುವಕರು; ಪುತ್ತೂರು ರೈಲು ನಿಲ್ದಾಣದಲ್ಲಿ ಜಮಾಯಿಸಿದ ಹಿಂದೂ ಕಾರ್ಯಕರ್ತರು

spot_img
- Advertisement -
- Advertisement -

ಪುತ್ತೂರು; ಹಿಂದು ಯುವತಿಯರು ಮತ್ತು ಮುಸ್ಲಿಂ ಯುವಕರು ರೈಲಿನಲ್ಲಿ ಒಟ್ಟಿಗೆ ಪ್ರಯಾಣಿಸುತ್ತಿರುವುದಾಗಿ ಮಾಹಿತಿ ಪಡೆದ ಹಿಂದೂ ಸಂಘಟನೆಯ ಕಾರ್ಯಕರ್ತರು ಪುತ್ತೂರು ರೈಲು ನಿಲ್ದಾಣದಲ್ಲಿ ಜಮಾಯಿಸಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಪ್ರತಿಷ್ಟಿತ ಕಾಲೇಜೊಂದರ ವಿದ್ಯಾರ್ಥಿನಿಯರು ನೆಟ್ಟಣದಿಂದ ರೈಲು ಹತ್ತಿದ್ದು ಈ ವೇಳೆ ತಮ್ಮ ಬೋಗಿಯಲ್ಲಿದ್ದ ಮುಸ್ಲಿಂ ಯುವಕರೊಂದಿಗೆ ಮಾತನಾಡಿಕೊಂಡು ಬರುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಹಿಂದೂ ಕಾರ್ಯಕರ್ತರು ಪುತ್ತೂರು ರೈಲು ನಿಲ್ದಾಣಕ್ಕೆ ಆಗಮಿಸಿದ್ದಾರೆ ಅಲ್ಲದೇ ಪೊಲೀಸರಿಗೂ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಬಳಿಕ ಪೊಲೀಸರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಮಧ್ಯೆ ಯುವಕರೊಂದಿಗೆ ಪಯಣಿಸುತ್ತಿದ್ದ ಯುವತಿಯರು ರೈಲಿನಿಂದ  ಇಳಿದು ಹೋಗಿದ್ದಾರೆ  ಎನ್ನಲಾಗಿದೆ.

- Advertisement -
spot_img

Latest News

error: Content is protected !!