ಮಂಗಳೂರು: ನಂಜನಗೂಡಿನಲ್ಲಿ ದೇವಸ್ಥಾನ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಪತ್ರಿಕಾಗೋಷ್ಟಿ ನಡೆಸಿದ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸಿ ಡಾ. ಲೋಹಿತ್ ಕುಮಾರ್ ಸುವರ್ಣ ಎಂಬವರು ಕೇಸು ದಾಖಲಿಸಿದ್ದಾರೆ.
”ನಾವು ಗಾಂಧೀಜಿಯನ್ನೆ ಬಿಟ್ಟಿಲ್ಲ, ನೀವು ಯಾವ ಲೆಕ್ಕ ನಮಗೆ” ಎಂದು ಹೇಳುವ ಮೂಲಕ ಪರೋಕ್ಷವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊಲೆ ಬೆದರಿಕೆಯನ್ನೂ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
”ಮೈಸೂರಿನಲ್ಲಿ ದೇಗುಲವನ್ನು ಧ್ವಂಸ ಮಾಡಲಾಗಿದೆ. ಧಾರ್ಮಿಕ ಕೇಂದ್ರಗಳ ಪಟ್ಟಿ ಯಲ್ಲಿ ಮಸೀದಿ ಚರ್ಚ್ ಗಳು ಇವೆ. ತಾಕತ್ತಿದ್ರೆ ಆದರೆ ಆ ಪಟ್ಟಿಯಿಂದ ಒಂದೇ ಒಂದು ಮಸೀದಿ, ಚರ್ಚ್ ಒಡೆದು ತೋರಿಸಲಿ. ಅದ್ಯಾಕೆ ದೇವಸ್ಥಾನಗಳೇ ಟಾರ್ಗೆಟ್ ಆಗುತ್ತಿವೆ. ಹಿಂದೂಗಳು ಹೇಗಾದರೂ ಬಿಜೆಪಿಗೆ ಓಟು ಹಾಕುತ್ತಾರೆ. ಹಾಗಾಗಿ ದೇಗುಲ ಒಡೆಯಲಾಗಿದೆ ಎಂದು ಧರ್ಮೇಂದ್ರ ಆರೋಪಿಸಿದರು.
ಇನ್ನು ಧರ್ಮೇಂದ್ರ ಅವರ ವಿರುದ್ಧ ಕೇಸು ದಾಖಲಾಗಿದೆ:
120 (ಬಿ): ಕ್ರಿಮಿನಲ್ ಪಿತೂರಿಯ ಶಿಕ್ಷೆ.
153 (A): ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ವೈರತ್ವವನ್ನು ಉತ್ತೇಜಿಸುವುದು.
505 (2): ಸಾರ್ವಜನಿಕ ಕಿಡಿಗೇಡಿತನಕ್ಕೆ ಹೇಳಿಕೆ
506: ಕ್ರಿಮಿನಲ್ ಬೆದರಿಕೆಯ ಶಿಕ್ಷೆ.
465: ವಂಚನೆಯ ಉದ್ದೇಶಕ್ಕಾಗಿ ಶಿಕ್ಷೆ.
468: ಮೋಸದ ಉದ್ದೇಶ.
469: ಪ್ರತಿಷ್ಠೆಗೆ ಹಾನಿ ಮಾಡುವ ಉದ್ದೇಶ.
149: ಕಾನೂನುಬಾಹಿರ ವಿಧಾನಸಭೆಯ ಪ್ರತಿಯೊಬ್ಬ ಸದಸ್ಯರು ಸಾಮಾನ್ಯ ವಸ್ತುವಿನ ವಿಚಾರಣೆಯಲ್ಲಿ ಮಾಡಿದ ಅಪರಾಧಕ್ಕೆ ತಪ್ಪಿತಸ್ಥರು.