- Advertisement -
![]()
- Advertisement -
ಬೆಂಗಳೂರು : ಹಿಜಾಬ್, ಹಲಾಲ್, ಜಟ್ಕಾ ಕಟ್, ಆಜಾನ್ ಬಳಿಕ ಇದೀಗ ರಾಜ್ಯದಲ್ಲಿ ಮತ್ತೊಂದು ಧರ್ಮ ದಂಗಲ್ ಶುರುವಾಗುತ್ತಾ ಅನ್ನೋ ಅನುಮಾನ ಶುರುವಾಗಿದೆ. ಕರ್ನಾಟಕದಲ್ಲಿ ಮದರಸ ನಿಷೇಧಿಸುವಂತೆ ವಿವಿಧ ಹಿಂದೂಪರ ಸಂಘಟನೆಗಳು ಶಿಕ್ಷಣ ಇಲಾಖೆಗೆ ಮನವಿ ಮಾಡಿವೆ.
ಮದರಸಗಳು ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿವೆ. ಹೀಗಾಗಿ ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ಸರ್ಕಾರ ನಿಷೇಧ ಮಾಡಿದಂತೆ ಕರ್ನಾಟಕದಲ್ಲೂ ಮದರಸಗಳನ್ನು ಬ್ಯಾನ್ ಮಾಡಿ ಅಲ್ಲಿ ಓದುತ್ತಿರುವ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ಮಾಡಬೇಕು ಎಂದು ಶಿಕ್ಷಣ ಇಲಾಖೆಗೆ ಮನವಿ ಮಾಡಲಾಗಿದೆ.
ಮದರಸ ಶಿಕ್ಷಕರಿಗೆ ಯಾವುದೇ ಪಾಠ ಬೋಧನೆಗೆ ಅರ್ಹತೆ ಇರುವುದಿಲ್ಲ. ಮಕ್ಕಳಿಗೆ ಗಣಿತ ಇತಿಹಾಸ ಭಾಷೆಗಳ ಪರಿಚಯವೇ ಮದರಸಗಳಲ್ಲಿ ಮಾಡುವುದಿಲ್ಲ. ಹೀಗಾಗಿ ಉಗ್ರ ಸಂಘಟನೆಗಳ ಜೊತೆ ಸಂಪರ್ಕ ಹೊಂದಿರುವ ಮದರಸಗಳನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಹಿಂದೂಪರ ಸಂಘಟನೆಗಳು ಒತ್ತಾಯಿಸಿವೆ.
- Advertisement -


