Thursday, June 4, 2026
Homeಕರಾವಳಿಮಂಗಳೂರಿನಲ್ಲಿ ದರ್ಗಾದಲ್ಲಿ ಹಿಂದೂ ಶೈಲಿಯ ಗುಡಿ ಪತ್ತೆ

ಮಂಗಳೂರಿನಲ್ಲಿ ದರ್ಗಾದಲ್ಲಿ ಹಿಂದೂ ಶೈಲಿಯ ಗುಡಿ ಪತ್ತೆ

- Advertisement -
- Advertisement -

ಮಂಗಳೂರು: ನವೀಕರಣಕ್ಕಾಗಿ ದರ್ಗಾ ಕೆಡವಿದಾಗ ಹಿಂದೂ ಶೈಲಿಯ ದೇವಸ್ಥಾನದ ಗುಡಿ ಪತ್ತೆಯಾಗಿದೆ‌. ಮಂಗಳೂರು ಹೊರವಲಯದ ಗಂಜಿಮಠ ಬಳಿಯ ಮಳಲಿ ಎಂಬಲ್ಲಿ ಗುಡಿ ಪತ್ತೆಯಾಗಿದೆ.

ಗುಡಿ ಪತ್ತೆಯಾಗಿರುವ ಮಾಹಿತಿ ತಿಳಿದು ಸ್ಥಳಕ್ಕೆ ಮಂಗಳೂರು ತಹಸೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌. ವಿಶ್ವ ಹಿಂದೂ ಪರಿಷತ್ ಪ್ರಮುಖರು ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು ಕೂಡಾ ಸ್ಥಳಕ್ಕೆ ಭೇಟಿ ನೀಡಿದ್ದು, ಜಾಗದ ದಾಖಲೆ ಹಾಗೂ ಇತಿಹಾಸದ ಬಗ್ಗೆ ಮಾಹಿತಿ ಕಲೆ ಹಾಕಲು ತಹಶೀಲ್ದಾರ್ ಮುಂದಾಗಿದ್ದಾರೆ.

ಸದ್ಯ ದರ್ಗಾದ ನವೀಕರಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಸೂಚನೆ ನೀಡಿದ್ದು, ಕೆಲಸ ಸ್ಥಗಿತಗೊಳಿಸಿ ಜಿಲ್ಲಾಡಳಿತದ ನಿರ್ಧಾರಕ್ಕೆ ದರ್ಗಾ ಆಡಳಿತ ಸಮ್ಮತಿ ಸೂಚಿಸಿದೆ.

- Advertisement -

Latest News

error: Content is protected !!