Saturday, June 6, 2026
Homeಕರಾವಳಿಹಿಂದುತ್ವ ನನ್ನ ಮೊದಲ ಆಯ್ಕೆ; ಸಚಿವ ಸುನೀಲ್ ಕುಮಾರ್

ಹಿಂದುತ್ವ ನನ್ನ ಮೊದಲ ಆಯ್ಕೆ; ಸಚಿವ ಸುನೀಲ್ ಕುಮಾರ್

- Advertisement -
- Advertisement -

ಉಡುಪಿ: ಹಿಂದುತ್ವ ಹಾಗೂ ಅಭಿವೃದ್ಧಿ ವಿಚಾರದಲ್ಲಿ ರಾಜಿ ಇಲ್ಲ. ಹಿಂದುತ್ವವೇ ನನ್ನ ಮೊದಲ ಆಯ್ಕೆ. ಸಚಿವ, ಶಾಸಕ ಸ್ಥಾನ ಆ ನಂತರದ ಆಯ್ಕೆ ಎಂದು ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ.

ಶುಕ್ರವಾರ ಮೊದಲ ಬಾರಿ ಉಡುಪಿ ಜಿಲ್ಲೆ ಹಾಗೂ ಕಾರ್ಕಳ ಕ್ಷೇತ್ರಕ್ಕೆ ಆಗಮಿಸಿದ ಸುನಿಲ್ ಕುಮಾರ್ ಕ್ಷೇತ್ರದ ಗಡಿಭಾಗವಾದ ಬೆಳ್ಮಣ್‌ನಲ್ಲಿ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು,ಕಾರ್ಕಳ ಕ್ಷೇತ್ರದ ಜನ ಮೂರುಬಾರಿ ಆಯ್ಕೆ ಮಾಡಿದ್ದರಿಂದ ಸಚಿವನಾದೆ. ಇದರ ಪರಿಣಾಮವಾಗಿ ಇವತ್ತು ನಾನು ಸಚಿವನಾಗಲು ಸಾಧ್ಯವಾಗಿದೆ. ಆದರೆ ಯಾವುದೇ ಹಂತದಲ್ಲೂ ಹಿಂದುತ್ವ ವಿಚಾರದಲ್ಲಿ ರಾಜಿ ಮಾಡುವುದಿಲ್ಲ. ಮೊದಲ ಆಯ್ಕೆ ಹಿಂದುತ್ವ ಮತ್ತು ಅಭಿವೃದ್ಧಿ ಎಂದರು.

ಪಕ್ಷ ನನಗೆ ದೊಡ್ಡ ಜವಾಬ್ದಾರಿಯನ್ನು ಕೊಟ್ಟಿದೆ. ಮುಖ್ಯಮಂತ್ರಿಗಳು ಮತ್ತು ಪಕ್ಷದ ಹಿರಿಯರು ನಿರೀಕ್ಷೆಯಿಟ್ಟು ಸ್ಥಾನ ಕೊಟ್ಟಿದ್ದಾರೆ. ಜವಾಬ್ದಾರಿ ನಿಭಾಯಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನನಗೆ ಇಷ್ಟದ ಖಾತೆ ಎಂಬುದಿಲ್ಲ. ಮುಖ್ಯಮಂತ್ರಿಗಳು ಕೊಟ್ಟ ಖಾತೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿಭಾಯಿಸುತ್ತೇನೆ ಎಂದರು.

- Advertisement -

Latest News

error: Content is protected !!