Tuesday, May 7, 2024
Homeಕರಾವಳಿನೆಲ್ಯಾಡಿಯಲ್ಲಿ KSRTC ಬಸ್ ಚಾಲಕನಿಂದ ಹಿಟ್ ಅಂಡ್ ರನ್: ಬೈಕ್ ಸವಾರ ಮೃತ್ಯು

ನೆಲ್ಯಾಡಿಯಲ್ಲಿ KSRTC ಬಸ್ ಚಾಲಕನಿಂದ ಹಿಟ್ ಅಂಡ್ ರನ್: ಬೈಕ್ ಸವಾರ ಮೃತ್ಯು

spot_img
- Advertisement -
- Advertisement -

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ KSRTC ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ಸಂಭವಿಸಿದೆ.

ಸಕಲೇಶಪುರದಿಂದ ನೆಲ್ಯಾಡಿ ಕಡೆಗೆ ತೆರಳುತ್ತಿದ್ದ ಬೈಕಿಗೆ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ಪೆರಿಯಶಾಂತಿ ಸಮೀಪದ ಲಾವತ್ತಡ್ಕದಲ್ಲಿ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಮೃತಪಟ್ಟು, ಸಹ ಸವಾರ ಸಕಲೇಶಪುರ ತಾಲೂಕಿನ ಕೆಂಚಮ್ಮನ ಹೊಸಕೋಟೆ ನಿವಾಸಿ ಮೋಹನ್ ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವ್ಯಕ್ತಿಯ ಪರಿಚಯ ಇನ್ನಷ್ಟೇ ದೊರೆಯಬೇಕಿದೆ.

ಬೈಕಿಗೆ ಢಿಕ್ಕಿ ಹೊಡೆದು ಪರಾರಿಯಾಗಿದ್ದ ಕೆಎಸ್ಸಾರ್ಟಿಸಿ ಬಸ್ಸನ್ನು ತಕ್ಷಣವೇ ಸ್ಥಳೀಯರ ಸಹಕಾರದೊಂದಿಗೆ ನೆಲ್ಯಾಡಿ ಹೊರಠಾಣಾ ಪೊಲೀಸರು ಗುಂಡ್ಯದಲ್ಲಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -
spot_img

Latest News

error: Content is protected !!