Thursday, June 4, 2026
Homeಕರಾವಳಿಮಂಗಳೂರು;  ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿ: ಕಾರ್ಮಿಕ ಸಾವು

ಮಂಗಳೂರು;  ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿ: ಕಾರ್ಮಿಕ ಸಾವು

- Advertisement -
- Advertisement -

ಮಂಗಳೂರು; ಅಪರಿಚಿತ ವಾಹನವೊಂದು ಹುಲ್ಲುಗಳನ್ನು ಕಟಾವು ಮಾಡುತ್ತಿದ್ದ ಇಬ್ಬರು ಕಾರ್ಮಿಕರಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ಇನ್ನೋರ್ವ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಜೆಪ್ಪಿನಮೊಗರು ಬಳಿ ನಡೆದಿದೆ.

ಬಿಹಾರ ಮೂಲದ ವಿಕ್ಕಿ ಖಾನ್ (23)ಮೃತ ಕಾರ್ಮಿಕ. ಘಟನೆಯಲ್ಲಿ ಗೋಪಾಲ್ ಪೂಜಾರಿ ಎಂಬವರು ಗಾಯಗೊಂಡಿದ್ದಾರೆ‌. ಇವರು ಹೆದ್ದಾರಿ ಬಳಿ ಬೆಳಿಗ್ಗೆ ಹುಲ್ಲುಗಳನ್ನು ಕಟಾವು ಮಾಡುತ್ತಿದ್ದಾಗ, ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ವಾಹನ ಢಿಕ್ಕಿ ಹೊಡೆದಿದೆ.

ಪಿಕಪ್ ವಾಹನದ ಮೇಲೆ ಸಂಶಯ ವ್ಯಕ್ತಪಡಿಸಿರುವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.ಈ ಕುರಿತು ನಾಗುರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -

Latest News

error: Content is protected !!