Thursday, June 4, 2026
Homeಕರಾವಳಿಉಡುಪಿಹೆಬ್ರಿಯ ಬಂಟರ ಭವನದ ಎದುರು ಹಿಟ್ ಅಂಡ್ ರನ್: ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆಯೇ ಪಾದಚಾರಿ...

ಹೆಬ್ರಿಯ ಬಂಟರ ಭವನದ ಎದುರು ಹಿಟ್ ಅಂಡ್ ರನ್: ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆಯೇ ಪಾದಚಾರಿ ಸಾವು

- Advertisement -
- Advertisement -

ಹೆಬ್ರಿ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಘಟನೆ ಹೆಬ್ರಿಯಲ್ಲಿ ನಡೆದಿದೆ.  ಇಲ್ಲಿನ ಬಂಟರ ಭವನದ ಎದುರು ನಿನ್ನೆ ರಾತ್ರಿ ಈ ಘಟನೆ ನಡೆದಿದೆ.

ಆನಂದ್‌ ಮೃತಪಟ್ಟ ವ್ಯಕ್ತಿ. ಇವ್ರು ಆನಂದ ಹೆಬ್ರಿಯ ನೆಂಟರ ಮನೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಹೆಬ್ರಿಯಿಂದ ನಡೆದುಕೊಂಡು ಹೋಗುತ್ತಿದ್ದರು. ಆಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡ ಆನಂದ್, ಮಂಗಳೂರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ. ಹೆಬ್ರಿ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಲಾಗಿದೆ.

- Advertisement -

Latest News

error: Content is protected !!