Sunday, June 7, 2026
Homeಕರಾವಳಿನಂತೂರಿನಲ್ಲಿ ಹಿಟ್ ಅಂಡ್ ರನ್;ವಿದ್ಯಾರ್ಥಿ ಸ್ಥಳದಲ್ಲೇ ಸಾವು!

ನಂತೂರಿನಲ್ಲಿ ಹಿಟ್ ಅಂಡ್ ರನ್;ವಿದ್ಯಾರ್ಥಿ ಸ್ಥಳದಲ್ಲೇ ಸಾವು!

- Advertisement -
- Advertisement -

ಮಂಗಳೂರು: ವಾಹನವೊಂದು ಹಿಂದಿನಿಂದ ಡಿಕ್ಕಿಯಾಗಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಗರದ ನಂತೂರು – ಪಂಪೈಲ್ ಹೆದ್ದಾರಿಯಲ್ಲಿ ನಡೆದಿದೆ.

ಮಂಗಳೂರಿನ ಲಕ್ಷ್ಮೀ ಮೆಮೋರಿಯಲ್ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದ ಮಹಾರಾಷ್ಟ್ರದ ಪೂನಾ ಮೂಲದ ಮಾನಸ್ ಉಗಾಲೆ (27) ಎಂಬಾತ ಮೃತ ಯುವಕ.

ಈತ ನಂತೂರಿನಿಂದ ಪಂಪೈಲ್ ನತ್ತ ಪಲ್ಸರ್ ಬೈಕಿನಲ್ಲಿ ತೆರಳುತ್ತಿದ್ದಾಗ ಯಾವುದೋ ವಾಹನ ಹಿಂದಿನಿಂದ ಡಿಕ್ಕಿಯಾಗಿ ಪರಾರಿಯಾಗಿದೆ. ಇತರೇ ವಾಹನದವರು ಟ್ರಾಫಿಕ್ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಕದ್ರಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದು, ಡಿಕ್ಕಿಯಾಗಿ ಪರಾರಿಯಾದ ವಾಹನದ ಪತ್ತೆಗೆ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.

- Advertisement -

Latest News

error: Content is protected !!