Monday, June 8, 2026
Homeಕರಾವಳಿಸೆಪ್ಟೆಂಬರ್ 2 ರಂದು ಮಂಗಳೂರು ನಗರದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ದಕ್ಷಿಣ ಕನ್ನಡ ಡಿಸಿ...

ಸೆಪ್ಟೆಂಬರ್ 2 ರಂದು ಮಂಗಳೂರು ನಗರದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ದಕ್ಷಿಣ ಕನ್ನಡ ಡಿಸಿ ಡಾ. ಕೆ.ವಿ. ರಾಜೇಂದ್ರ ಆದೇಶ.

- Advertisement -
- Advertisement -

ಮಂಗಳೂರು: ಸೆಪ್ಟೆಂಬರ್ 2 ರಂದು ‌ಮಂಗಳೂರಿನ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಸೆಪ್ಟೆಂಬರ್ 2ರಂದು ಮಂಗಳೂರಿನಲ್ಲಿ ‌ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮ ಹಾಗೂ ನಗರದ ಹಲವೆಡೆ ಗಣೇಶೋತ್ಸವದ ವಿಸರ್ಜನಾ‌ ಮೆರವಣಿಗೆಗಳು ಇರುವ ಕಾರಣದಿಂದ
ಜನ ಸಂಚಾರ ಮತ್ತು‌ ವಾಹನ ದಟ್ಟಣೆಯಾಗುವ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ.

ಮಂಗಳೂರು ನಗರದ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

- Advertisement -

Latest News

error: Content is protected !!