Sunday, June 7, 2026
Homeಕರಾವಳಿಉಡುಪಿದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ; ನಾಳೆಯೂ ಶಾಲಾ ಕಾಲೇಜುಗಳಿಗೆ...

ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ; ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ

- Advertisement -
- Advertisement -

ಕರಾವಳಿ, ಕೊಡಗು, ಮಲೆನಾಡು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಕೊಡಗು, ಉಡುಪಿ ಜಿಲ್ಲೆಗಳಲ್ಲಿ ಅಲ್ಲಿನ ಪರಿಸ್ಥಿತಿ ನೋಡಿಕೊಂಡು ಮುಂಜಾಗ್ರತೆ ಕ್ರಮವಾಗಿ ಶಾಲೆಗಳಿಗೆ ಜುಲೈ7 ರಂದು ಜಿಲ್ಲಾಡಳಿತ ರಜೆ ಘೋಷಿಸಿದೆ.


ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನವರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ದಿನಾಂಕ 07.07.2022 ರಂದು ರೆಡ್ – ಅಲರ್ಟ್ ಘೋಷಣೆಯಾಗಿರುವುದರಿಂದ, ಅತಿಹೆಚ್ಚು ಮಳೆಯಾಗುವ ಸಾಧ್ಯತೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ ಎಂದು ಅದು ತನ್ನ ಆದೇಶ ಪತ್ರದಲ್ಲಿ ತಿಳಿಸಿದೆ.

- Advertisement -

Latest News

error: Content is protected !!